6

ಜುಲೈ 22: ಮಳೆ ಕಡಿಮೆಯಾದರೂ ಮಕ್ಕಳ ರಜೆ ತಪ್ಪಿಲ್ಲ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಲ್ಪ ಪ್ರಮಾಣದಲ್ಲಿ ಕಡಿಮೆ ಆಗಿದ್ದರೂ ಶಾಲೆಗಳ ಗೋಡೆ ಮಳೆಗೆ ನೆನೆದಿದೆ. ಬಹುತೇಕ ಶಾಲೆಗಳಲ್ಲಿ ಮಣ್ಣಿನ ಗೋಡೆಗಳೇ ಇರುವುದರಿಂದ ಮಕ್ಕಳನ್ನು ಶಾಲೆಗೆ ಕರೆಯುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಇದರೊಂದಿಗೆ ಶಾಲೆಗಳಲ್ಲಿ ತೆರೆಯಲಾದ `ಕಾಳಜಿ ಕೇಂದ್ರ’ಗಳು ಹಾಗೇ ಇದ್ದು, ಕಲಿಕೆಯ ವಾತಾವರಣ ನಿರ್ಮಾಣವಾಗಿಲ್ಲ.
ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ `ಯಾವುದೇ ಅಪಾಯ ಆಗದಂತೆ ಮುನ್ನಚ್ಚರಿಕೆವಹಿಸಿ’ ಎಂದು ಸೂಚಿಸಿದ್ದು, ಶಿರಸಿ ಡಿಡಿಪಿಐ `ರಜೆ ಅಗತ್ಯ’ ಎಂದು ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಅಪರ ಜಿಲ್ಲಾಧಿಕಾರಿಗಳ ಮೌಖಿಕ ಆದೇಶದ ಮೇರೆಗೆ ಶಿರಸಿ ಡಿಡಿಪಿಐ ಭಾನುವಾರ ಸಂಜೆ ರಜೆ ಘೋಷಿಸಿದ್ದಾರೆ. ಕಾರವಾರ ಶೈಕ್ಷಣಿಕ ಜಿಲ್ಲೆಗೆ ಸಂಬAಧಿಸಿ ರಜೆ ಅಗತ್ಯವಿರುವ ಬಗ್ಗೆ ಪ್ರಸ್ತಾವನೆ ಸಲ್ಲಿಕೆಯಾಗದಿದ್ದರೂ ಪರಿಸ್ಥಿತಿ ಅವಲೋಕಿಸಿ 12 ತಾಲೂಕಿನ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಅಂಗನವಾಡಿ, ಶಾಲೆ, ಪ್ರೌಢಶಾಲೆ, ಪಿಯುಸಿ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ನಿಯಮ ಅನ್ವಯವಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 21ರವರೆಗೂ ರೆಡ್ ಅಲರ್ಟ ಘೋಷಿಸಲಾಗಿತ್ತು. ಆದರೆ, ಜುಲೈ 21ರಂದು ಮಳೆ ಪ್ರಮಾಣ ಮಳೆ ನಿಂತರೂ ಹಾನಿ ನಿಂತಿಲ್ಲ. ಹೀಗಾಗಿ ಮುನ್ನಚ್ಚರಿಕಾ ಕ್ರಮವಾಗಿ `ಮಳೆ ರಜೆ’ಯನ್ನು ಮುಂದುವರೆಸಲಾಗಿದೆ. ರಾತ್ರಿ 9.15ರ ವೇಳೆಗೆ ಜಿಲ್ಲೆಯ ಎಲ್ಲಾ ತಾಲೂಕಿಗೂ ಅನ್ವಯಿಸುವಂತೆ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page