6

ವೈದಿಕರು ಗೋಷ್ಠಿಗಳಲ್ಲಿ ಭಾಗವಹಿಸುವುದು ಅಗತ್ಯ: ಸೋಂದಾ ಶ್ರೀ

ಶಿರಸಿ: `ಯುವ ವೈದಿಕರು ಹೆಚ್ಚೆಚ್ಚು ವೈದಿಕ ಗೋಷ್ಠಿಗಳಲ್ಲಿ ಪಾಲ್ಗೊಳ್ಳಬೇಕು’ ಎಂದು ಸೋಂದಾ ಸ್ವರ್ಣವಲ್ಲೀ ಸಂಸ್ಥಾನದ ಮಠಾಧೀಶ ಗಂಗಾಧರೇoದ್ರ ಸರಸ್ವತೀ ಮಹಾ ಸ್ವಾಮೀಜಿ ಹೇಳಿದರು.
ಅವರು ಸೋಮವಾರ ಸ್ವರ್ಣವಲ್ಲೀಯಲ್ಲಿ ನಡೆದ ವೈದಿಕ ಗೋಷ್ಠಿ ಸಾನ್ನಿಧ್ಯ ನೀಡಿ ಆಶೀರ್ವಚನ ನುಡಿದರು.
`ವೈದಿಕ ಗೋಷ್ಠಿಗಳಲ್ಲಿ ಭಾಗವಹಿಸುವುದರಿಂದ ವೈದಿಕ ಕರ್ಮಗಳಲ್ಲಿ ಅನೇಕ ತಪ್ಪು ಹೆಜ್ಜೆಗಳನ್ನು ಇಡುವುದು ತಪ್ಪುತ್ತದೆ. ಕರ್ಮಗಳನ್ನು ಶಾಸ್ತ್ರೀಯವಾಗಿ ನಡೆಸಲು ವೈದಿಕರು ಶಕ್ತರಾಗುತ್ತಾರೆ’ ಎಂದರು. `ಘೋಷ್ಠಿಗಳಿಂದ ಸಮಾಜವು ಧರ್ಮ ಮಾರ್ಗದಿಂದ ವಿಮುಖ ಹೊಂದುತ್ತಿರುವದನ್ನು ತಪ್ಪಿಸಬಹುದು. ಇಂತಹ ಗೋಷ್ಠಿಗಳು ಒಳ್ಳೆಯ ಸಾಧನ. ಒಟ್ಟಿಗೆ ಸೇರಿ ನಿರಂತರವಾಗಿ ಚಿಂತನೆ ಮಾಡುವುದರ ಮೂಲಕ ಅನೇಕ ಗೊಂದಲಗಳನ್ನು ನಿವಾರಿಸಿಕೊಳ್ಳಲು ಸಾಧ್ಯ’ ಎಂದರು.
ಸ್ವರ್ಣವಲ್ಲೀ ಮಠದ ಶ್ರೀಆನಂದಬೋಧೇoದ್ರ ಸರಸ್ವತೀ ಸ್ವಾಮೀಜಿ ಸಾನ್ನಿಧ್ಯ ನೀಡಿದ್ದರು.

  • Related Posts

    ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ

    Share this… Facebook Pinterest Twitter Linkedin Whatsapp*ಗಂಗಾಮತ ಸಮಾಜ ಒಗ್ಗಟ್ಟಾದರೆ ಒಳ್ಳೆಯ ಭವಿಷ್ಯ ಇದೆ: ಬಸವರಾಜ ಬೊಮ್ಮಾಯಿ* *ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬಸವರಾಜ ಬೊಮ್ಮಾಯಿ* ಹಾವೇರಿ: ಗಂಗಾಮತ ಸಮಾಜಕ್ಕೆ ದೊಡ್ಡ ಶಕ್ತಿ ತುಂಬಬೇಕೆಂದರೆ ಎಲ್ಲರೂ ಒಂದಾಗಿ ಒಂದೇ…

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    Leave a Reply

    Your email address will not be published. Required fields are marked *

    You cannot copy content of this page