6

ಇದು ಸುಳ್ಳು ಸುದ್ದಿ!

ಬುಧವಾರ ಸಂಜೆಯಿoದ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಹೆದ್ದಾರಿ ಕುಸಿದಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದ್ದು, ಇದು ಸತ್ಯವಲ್ಲ.

ಅರಬೈಲ್ ಘಟ್ಟದಲ್ಲಿ ಎಲ್ಲಿಯೂ ಹೆದ್ದಾರಿ ಕುಸಿತ ಆಗಿಲ್ಲ. ರಸ್ತೆ ಸಂಚಾರ ಸರಿಯಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಕೆಲ ಕಿಡಿಗೇಡಿಗಳು ಜನರಲ್ಲಿ ಗೊಂದಲ ಮೂಡಿಸುವುದಕ್ಕಾಗಿ `ಹುಬ್ಬಳ್ಳಿ ಅಂಕೋಲಾ ಹೆದ್ದಾರಿ ಸಂಚಾರ ಸ್ಥಗಿತ – ಅರಬೈಲ್ ಘಟ್ಟದಲ್ಲಿ ಹೆದ್ದಾರಿ ಕುಸಿತ’ ಎಂದು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಇದರ ಜೊತೆ ಹಳೆಯ ವಿಡಿಯೋ ಒಂದನ್ನು ಹರಿಬಿಟ್ಟಿದ್ದು, ಯಲ್ಲಾಪುರ ಪೊಲೀಸರು ಬುಧವಾರ ಅರಬೈಲ್ ಘಟ್ಟದಲ್ಲಿ ಯಾವುದೇ ಕುಸಿತ ಆಗಿಲ್ಲ ಎಂದು  ತಿಳಿಸಿದ್ದಾರೆ.
ಪೊಲೀಸರು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಬರುವ ವಿಷಯಗಳನ್ನು ಗಮನಿಸುತ್ತಿದ್ದು, ಈ ರೀತಿ ಸುಳ್ಳು ಸುದ್ದಿ ಹರಡುವವರ ವಿರುದ್ಧ 9480805200ಗೆ ಸಾರ್ವಜನಿಕರು ಸಹ ಮಾಹಿತಿ ಕೊಡಬಹುದಾಗಿದೆ.

`ಸುಳ್ಳು ಮಾಹಿತಿ ಡಿಲಿಟ್ ಮಾಡಿ. ಸತ್ಯವನ್ನು ಶೇರ್ ಮಾಡಿ’

  • Related Posts

    ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ

    Share this… Facebook Pinterest Twitter Linkedin Whatsapp*ಗಂಗಾಮತ ಸಮಾಜ ಒಗ್ಗಟ್ಟಾದರೆ ಒಳ್ಳೆಯ ಭವಿಷ್ಯ ಇದೆ: ಬಸವರಾಜ ಬೊಮ್ಮಾಯಿ* *ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬಸವರಾಜ ಬೊಮ್ಮಾಯಿ* ಹಾವೇರಿ: ಗಂಗಾಮತ ಸಮಾಜಕ್ಕೆ ದೊಡ್ಡ ಶಕ್ತಿ ತುಂಬಬೇಕೆಂದರೆ ಎಲ್ಲರೂ ಒಂದಾಗಿ ಒಂದೇ…

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    Leave a Reply

    Your email address will not be published. Required fields are marked *

    You cannot copy content of this page