6

ಶಿರೂರು: ಸಂತ್ರಸ್ತರ ಕುಟುಂಬಕ್ಕೆ ಶ್ರೀಗಳ ಅಭಯ

ಅಂಕೋಲಾ: ಜುಲೈ 16ರಂದು ಶಿರೂರಿನಲ್ಲಿ ಗುಡ್ಡ ಕುಸಿತದಿಂದ ಕಣ್ಮರೆಯಾಗಿರುವ ಗಂಗೆಕೊಳ್ಳದ ಲೋಕೇಶ ನಾಯ್ಕ ಕುಟುಂಬದವರನ್ನು ಅರುಣಾನಂದ ಸ್ವಾಮೀಜಿ ಭೇಟಿ ಮಾಡಿ ಸಾಂತ್ವಾನ ಹೇಳಿದರು.
ಸದಾ ತಮ್ಮೊಂದಿಗೆ ಇರುವುದಾಗಿ ಸ್ವಾಮೀಜಿ ಭರವಸೆ ನೀಡಿದ್ದು, ನೊಂದವರಿಗೆ ಧೈರ್ಯ ತುಂಬಿದರು. `ಈ ದುರ್ಘಟನೆಯಲ್ಲಿ ಇಲ್ಲಿಯವರೆಗೆ ಒಂದೇ ಕುಟುಂಬದ ನಾಲ್ವರು ಸೇರಿದಂತೆ 8 ಜನರು ಸಾವನ್ನಪ್ಪಿದ್ದು, ಅಧಿಕೃತವಾಗಿ ಇನ್ನು ಮೂರು ಜನರು ನಾಪತ್ತೆಯಾಗಿದ್ದಾರೆ. ಅವರಲ್ಲಿ ಈ ಲೋಕೇಶ ನಾಯ್ಕ ಕೂಡ ಒಬ್ಬರಾಗಿದ್ದಾರೆ. ಅವರ ಪತ್ತೆಗೆ ತಾನೂ ಪ್ರಾರ್ಥಿಸುವೆ’ ಎಂದು ಅವರು ಹೇಳಿದರು. ಸಾಮಾಜಿಕ ಹೋರಾಟಗಾರ ರಾಜು ಮಾಸ್ತಿಹಳ್ಳ, ನಾಡುಮಾಸ್ಕೇರಿ ಗ್ರಾ.ಪಂ. ಸದಸ್ಯ ಚಂದ್ರಶೇಖರ ನಾಯ್ಕ, ಪಾಂಡುರAಗ ನಾಯ್ಕ, ಕೇಶವ ನಾಯ್ಕ ಇತರರು ಇದ್ದರು.

 

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page