6

ಸುಳ್ಳು ಹೇಳಿ ಸಿಕ್ಕಿಬಿದ್ದರೆ ಶಿಕ್ಷೆ: ಇದು ಜಿಲ್ಲಾಧಿಕಾರಿ ಹೇಳಿದ ಸತ್ಯ!

ಸಾಮಾಜಿಕ ಜಾಲತಾಣದ ಹೋರಾಟಗಾರರಿಗೆ ಕೊನೆಯ ಎಚ್ಚರಿಕೆ!

ಅತಿಯಾದ ಮಳೆ, ಗುಡ್ಡ ಕುಸಿತ, ನೆರೆ ಪ್ರವಾಹ ಹಾಗೂ ಅನೇಕ ಸಾವು-ನೋವುಗಳ ನಡುವೆ ಉತ್ತರ ಕನ್ನಡ ಜಿಲ್ಲಾಡಳಿತ ಜನರ ಜೀವ ರಕ್ಷಣೆಗಾಗಿ ಶ್ರಮಿಸುತ್ತಿದೆ. ಈ ನಡುವೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದು ಜಿಲ್ಲಾಡಳಿತಕ್ಕೆ ತಲೆನೋವಾಗಿದೆ. ಸುಳ್ಳು ಸುದ್ದಿಗಳನ್ನು ನಂಬಿದ ಜನ ಅನಗತ್ಯವಾಗಿ ಆತಂಕಕ್ಕೆ ಒಳಗಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸಿಕ್ಕಿಬಿದ್ದವರಿಗೆ ಕಠಿಣ ಶಿಕ್ಷೆ ವಿಧಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಕೆಲವರು ಬೇರೆ ಬೇರೆ ಪ್ರದೇಶದ ಫೋಟೋ ಹಾಗೂ ಹಳೆಯ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊoಡು ಜನರನ್ನು ಹೆದರಿಸುತ್ತಿದ್ದಾರೆ. ಗುಡ್ಡ ಕುಸಿತ, ರಸ್ತೆ ಕುಸಿತ, ಶಾಲೆಗೆ ರಜೆ ವಿಷಯವಾಗಿ ಜಿಲ್ಲೆಯಲ್ಲಿ ಅತಿ ಹೆಚ್ಚು ಸುಳ್ಳು ಸುದ್ದಿಗಳು ಹರಿದಾಡುತ್ತಿದೆ. ವಿವಿಧ ಮಾಧ್ಯಮ ಹಾಗೂ ಜಿಲ್ಲಾಡಳಿತದ ಅಧಿಕೃತ ಪತ್ರಗಳನ್ನು ತಿದ್ದುಪಡಿ ಮಾಡಿ ಹರಿಬಿಟ್ಟ ನಿದರ್ಶನಗಳು ವರದಿಯಾಗಿದೆ. ಜನತೆಗೆ ತಪ್ಪು ಸಂದೇಶ ಹರಿಬಿಡುತ್ತಿರುವ `ಸಾಮಾಜಿಕ ಜಾಲತಾಣ’ದ ಹೋರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಡಳಿತ ಎಚ್ಚರಿಸಿದೆ.

ಸುಳ್ಳು ಸುದ್ದಿ ಹರಡುವುದರಿಂದ ಸಂತ್ರಸ್ತರು ಆತಂಕಕ್ಕೆ ಒಳಗಾಗುತ್ತಿರುವುದನ್ನು ಮನಗಂಡ ಜಿಲ್ಲಾಡಳಿತ ಅಗಸ್ಟ 2ರಂದು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಯಾವುದೇ ಸಂದೇಶವನ್ನು ಖಚಿತಪಡಿಸಿಕೊಳ್ಳದೇ ಅದನ್ನು ಹರಿಬಿಡಬಾರದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಮನವಿ ಮಾಡಿದ್ದಾರೆ.

  • Related Posts

    ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ

    Share this… Facebook Pinterest Twitter Linkedin Whatsapp*ಗಂಗಾಮತ ಸಮಾಜ ಒಗ್ಗಟ್ಟಾದರೆ ಒಳ್ಳೆಯ ಭವಿಷ್ಯ ಇದೆ: ಬಸವರಾಜ ಬೊಮ್ಮಾಯಿ* *ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬಸವರಾಜ ಬೊಮ್ಮಾಯಿ* ಹಾವೇರಿ: ಗಂಗಾಮತ ಸಮಾಜಕ್ಕೆ ದೊಡ್ಡ ಶಕ್ತಿ ತುಂಬಬೇಕೆಂದರೆ ಎಲ್ಲರೂ ಒಂದಾಗಿ ಒಂದೇ…

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    Leave a Reply

    Your email address will not be published. Required fields are marked *

    You cannot copy content of this page