6

ಪೊಲೀಸ್ ದಾಳಿ: ಮತ್ತೆರೆಡು ಬಾಲ್ ಪೆನ್ ವಶ!

ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜಾರೋಷವಾಗಿ ನಡೆಯುತ್ತಿರುವ ಮಟ್ಕಾ ಅಡ್ಡೆಗಳ ಮೇಲೆ ದಾಳಿ ನಡೆಸುತ್ತಿರುವ ಪೊಲೀಸರು ಶನಿವಾರ ರಾತ್ರಿ ಅಂಕೋಲಾದಲ್ಲಿ ಕಾರ್ಯಾಚರಣೆ ನಡೆಸಿ ಆದರ್ಶ ನಾರ್ವೇಕರ್ (42) ಎಂಬ ಜೂಜುಕೋರನನ್ನು ವಶಕ್ಕೆ ಪಡೆದಿದ್ದಾರೆ.
ಕಾಕರಮಠದ ಆದರ್ಶ ನಾರ್ವೇಕರ್ ಬಾಂಡಿಕಟ್ಟಾ ಬಳಿ ಗೂಡಂಗಡಿ ನಡೆಸುತ್ತಿದ್ದ. ದಾರಿಯಲ್ಲಿ ಹೋಗುತ್ತಿದ್ದವರನ್ನು ಕರೆದು ಮಟ್ಕಾಗೆ ಹಣ ಕಟ್ಟುವಂತೆ ಪೀಡಿಸುತ್ತಿದ್ದ. ಅದೃಷ್ಟ ತಾಗಿದರೆ 1 ರೂಪಾಯಿಗೆ 80 ರೂ ಕೊಡುವುದಾಗಿ ನಂಬಿಸಿ ಹಣ ಪಡೆಯುತ್ತಿದ್ದ. ಆತನ ಮೇಲೆ ದಾಳಿ ನಡೆಸಿದ ಪೊಲೀಸರು ಆತನ ಬಳಿಯಿದ್ದ 410ರೂಪಾಯಿ ಹಣದ ಜೊತೆ ಮಟ್ಕಾ ಚೀಟಿ, ಅಂಕಿ-ಸoಖ್ಯೆ ಬರೆಯಲು ಬಳಸುತ್ತಿದ್ದ ಎರಡು ಬಾಲ್ ಪೆನ್’ನ್ನು ನ್ಯಾಯಾಲಯಕ್ಕೆ ಒಪ್ಪಿಸುವುದಕ್ಕಾಗಿ ವಶಕ್ಕೆ ಪಡೆದಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page