6

`ಗಿಡಮೂಲಿಕೆಗಳಲ್ಲಿ ಅಡಗಿದೆ ಆರೋಗ್ಯದ ರಹಸ್ಯ’

ಅಂಕೋಲಾ: `ಮಾನವನ ಎಲ್ಲಾ ಆರೋಗ್ಯ ಸಮಸ್ಯೆಗಳಿಗೂ ಪ್ರಕೃತಿಯಲ್ಲಿ ಪರಿಹಾರವಿದೆ’ ಎಂದು ಕಡಲ ವಿಜ್ಞಾನಿ ಹಾಗೂ ಪರಿಸರ ತಜ್ಞ ಡಾ.ವಿ.ಎನ್ ನಾಯಕ ಪ್ರತಿಪಾದಿಸಿದರು.
ಪತಂಜಲಿ ಯೋಗ ಸಮಿತಿ, ಭಾರತ ಸ್ವಾಭಿಮಾನ ಟ್ರಸ್ಟ್, ಕಿಸಾನ್ ಸಮಿತಿ, ಯುವ ಭಾರತ ಮತ್ತು ಪತಂಜಲಿ ಮಹಿಳಾ ಯೋಗ ಸಮಿತಿ ಆಶ್ರಯದಲ್ಲಿ ನಡೆದ ಗಿಡಮೂಲಿಕೆ ಕಾರ್ಯಾಗಾರದಲ್ಲಿ ಅವರು ಉಪನ್ಯಾಸ ನೀಡಿದರು.
`ಮನುಷ್ಯ ಅನಾದಿಕಾಲದಿಂದಲೂ ತನ್ನೆಲ್ಲ ಆರೋಗ್ಯ ಸಮಸ್ಯೆಗಳಿಗೆ ಪ್ರಕೃತಿದತ್ತವಾದ ಗಿಡಮೂಲಿಕೆಗಳಿಂದಲೇ ಪರಿಹಾರ ಕಂಡುಕೊಳ್ಳುತ್ತಾ ಬಂದಿದ್ದಾನೆ. ಹಾಗಾಗಿ ಗಿಡಮೂಲಿಕೆಗಳು ಜೀವಸಂಕುಲದ ಸಂರಕ್ಷಕಗಳು’ ಎಂದವರು ಹೇಳಿದರು. `ಬೇವು, ತುಳಸಿ, ಗರಿಕೆ, ಒಂದೆಲಗ, ಏಕನಾಯಕ ಮುಂತಾದ ಗಿಡಗಳ ವಿಶೇಷವಾಗಿ ಮಾವಿನ ಎಲೆಗಳಲ್ಲಿ ಔಷಧೀಯ ಗುಣಗಳಿವೆ. ಅಳಿವಿನಂಚಿಗೆ ಸರಿದಿರುವ ಅಶೋಕ ಮರಗಳ ಸಂರಕ್ಷಣೆ ಅಗತ್ಯ’ ಎಂದವರು ಹೇಳಿದರು.

 

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page