6

SP ಹೆಸರಿನಲ್ಲಿಯೇ ಮೋಸದ ಖಾತೆ!

ಪ್ರತಿಷ್ಠಿತರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಠಿಸಿ ಅಮಾಯಕರಿಂದ ಹಣ ವಸೂಲಿ ಮಾಡುವುದನ್ನು ಮುಂದುವರೆಸಿದ ಸೈಬರ್ ಕ್ರೆö ಕಿಡಿಗೇಡಿಗಳು ಇದೀಗ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಅವರ ಫೋಟೋ ಬಳಸಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದಾರೆ.

ಈ ಹಿಂದೆ ವಿವಿಧ ಪಿಸೈ ಹಾಗೂ ಪೊಲೀಸರ ಹೆಸರಿನಲ್ಲಿ ನಕಲಿ ಖಾತೆ ತೆರೆದ ದುಷ್ಕರ್ಮಿಗಳು ಅನೇಕರನ್ನು ಯಾಮಾರಿಸಿದ್ದರು. ಆದರೆ, ಈವರೆಗೂ ಪೊಲೀಸ್ ವರಿಷ್ಠಾಧಿಕಾರಿ ಫೋಟೋ ಬಳಸುವ ದುಸ್ಸಾಹಸಕ್ಕೆ ಕೈ ಹಾಕಿರಲಿಲ್ಲ. ಗುರುವಾರ ಪೊಲೀಸ್ ಇಲಾಖೆಯ ಖಾತೆಯನ್ನು ಖದೀಮರು ನಕಲು ಮಾಡಿದ್ದು, ಆ ಖಾತೆಯ ಮೂಲಕ ಹಲವರಿಗೆ ಸ್ನೇಹದ ಕೋರಿಕೆ ರವಾನಿಸಿದ್ದಾರೆ.

ಈ ಬಗ್ಗೆ ಅರಿತ ಜಿಲ್ಲಾ ಪೊಲೀಸ್ ಘಟಕ ಜನರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ. ನಕಲಿ ಖಾತೆಯಿಂದ ಬರುವ ಯಾವುದೇ ಸಂದೇಶವನ್ನು ನಂಬದoತೆ ಸೂಚಿಸಲಾಗಿದೆ. ಜಿಲ್ಲಾ ಪೊಲೀಸ್ ಘಟಕದ ಅಸಲಿ ಖಾತೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಅವರ ಫೋಟೋ ಜೊತೆ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಫೋಟೋವಿದೆ. ಆದರೆ, ನಕಲಿ ಖಾತೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಅವರು ನೌಕಾ ಅಧಿಕಾರಿಗಳ ಜೊತೆಯಿದ್ದ ಫೊಟೋವನ್ನು ಕಿಡಿಗೇಡಿಗಳು ಬಳಸಿದ್ದಾರೆ.

`ನಕಲಿ ಖಾತೆಯ ಮೂಲಕ ದುಷ್ಕರ್ಮಿಗಳು ಜನತೆಯಲ್ಲಿ ಹಣ ಕೇಳುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಜನ ಮೋಸ ಹೋಗಬಾರದು. ನಕಲಿ ಖಾತೆ ತೆರೆದ ಬಗ್ಗೆ ಸೈಬರ್ ಕ್ರೆö ಪೊಲಿಸ್ ದೂರು ದಾಖಲಾಗಲಿದೆ’ ಎಂದು ಪೊಲೀಸರು ಹೇಳಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page