6

ಮೋದಿ ಸಂಪುಟದಲ್ಲಿಯೂ ಇದ್ದಾರೆ ಕ್ರಿಮಿನಲ್ ಆರೋಪಿತರು!

ನವದೆಹಲಿ: ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರದ 28 ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ.
ಆ ಪೈಕಿ 19 ಸಚಿವರು ಕೊಲೆ ಯತ್ನ, ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ದ್ವೇಷ ಭಾಷಣದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ. ಅತ್ಯಂತ ಗಂಭೀರವಾಗ ಆರೋಪಗಳನ್ನು ಎದುರಿಸುತ್ತಿರುವ ಸಚಿವರ ಪೈಕಿ ಇಬ್ಬರು ಭಾರತೀಯ ದಂಡ ಸಂಹಿತೆ ಸೆಕ್ಷನ್ 307 ರ ಅಡಿಯಲ್ಲಿ ಕೊಲೆ ಯತ್ನಕ್ಕೆ ಸಂಬAಧಿಸಿದ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
ಬಂದರು, ಹಡಗು ಮತ್ತು ಜಲಮಾರ್ಗಗಳ ಖಾತೆ ರಾಜ್ಯ ಸಚಿವ ಶಾಂತನು ಠಾಕೂರ್ ಮತ್ತು ಶಿಕ್ಷಣ ಮತ್ತು ಅಭಿವೃದ್ಧಿ ಖಾತೆ ರಾಜ್ಯ ಸಚಿವ ಸುಕಾಂತ ಮಜುಂದಾರ್ ಅವರು ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ.

ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್, ಠಾಕೂರ್, ಮಜುಂದಾರ್, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆ ಸಚಿವ ಸುರೇಶ್ ಗೋಪಿ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಂ ವಿರುದ್ಧ ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಿವೆ. ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಎಂಟು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿವೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    Leave a Reply

    Your email address will not be published. Required fields are marked *

    You cannot copy content of this page