6

ಅಗಸ್ಟ 12: ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಈ ಕೆಲಸ ಕಡ್ಡಾಯ

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ `ನಶಾಮುಕ್ತ ಭಾರತ ಅಭಿಯಾನ’ಕ್ಕೆ ಕರೆ ನೀಡಿದ್ದು, ಈ ಹಿನ್ನಲೆ ಆಗಸ್ಟ್ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜು ಹಾಗೂ ಇನ್ನಿತರ ಶೈಕ್ಷಣಿಕ ಸಂಸ್ಥೆಗಳಲ್ಲಿ `ಮಾದಕ ವಸ್ತು ಬಳಸಲ್ಲ’ ಎಂದು ಪ್ರತಿಜ್ಞೆ ಸ್ವೀಕರಿಸಲು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ ಕರೆ ನೀಡಿದ್ದಾರೆ.

ಅಗಸ್ಟ 12ರ ಬೆಳಗ್ಗೆ 9 ಗಂಟೆಗೆ ಪ್ರತಿಯೊಬ್ಬರು ಪ್ರತಿಜ್ಞೆ ಸ್ವೀಕರಿಸಬೇಕು. ನಂತರ ಮಾದಕ ವ್ಯಸನದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿಚಾರಗೋಷ್ಠಿ ಹಾಗೂ ಕಾರ್ಯಗಾರಗಳನ್ನು ನಡೆಸಬೇಕು. ಜೊತೆಗೆ ಈ ಬಗ್ಗೆ ಜನ ಜಾಗೃತಿಗಾಗಿ ಮೆರವಣಿಗೆ, ಮ್ಯಾರಥಾನ್, ಬೀದಿ ನಾಟಕಗಳನ್ನು ಆಯೋಜಿಸಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.

ಪ್ರತಿ ಶಿಕ್ಷಣ ಸಂಸ್ಥೆಯಲ್ಲಿ ಸಹ `ನಶಾಮುಕ್ತ ಭಾರತ್ ಅಭಿಯಾನ’ದ ನೆನಪಿನ ಪ್ರಯುಕ್ತ ಕನಿಷ್ಟ ಒಂದು ಗಿಡ ನೆಡಬೇಕು. ಸ್ವಾತಂತ್ರ‍್ಯ ದಿನಾಚರಣೆಯ ದಿನದಂದು ಮುಖ್ಯ ಆತಿಥಿಗಳ ಭಾಷಣದಲ್ಲಿ `ನಶಾಮುಕ್ತ ಭಾರತ ಅಭಿಯಾನ’ದ ಕುರಿತು ಭಾಷಣ ಮಾಡಿಸಬೇಕು. ಶೈಕ್ಷಣಿಕ ಸಂಸ್ಥೆಗಳ ಜೊತೆ ಇತರೆ ಕಚೇರಿ, ವಸತಿ ನಿಲಯಗಳಲ್ಲಿ ಸಹ ಸಹ ಇದನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ ಸೂಚಿಸಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page