6

Guarantee | ಗ್ಯಾರಂಟಿ ಯೋಜನೆಗೆ ಇವರೇ ಗ್ಯಾರಂಟಿ!

ಉತ್ತರ ಕನ್ನಡ ಜಿಲ್ಲಾ ಜಿಲ್ಲಾ ಗ್ಯಾರಂಟಿ (Guarantee) ಯೋಜನೆಗಳ ಅನುಷ್ಠಾನ ಪ್ರಾಧಿಕಾರಕ್ಕೆ ಸತೀಶ್ ಪಿ ನಾಯ್ಕ ಅಧ್ಯಕ್ಷ. ಜಿಲ್ಲಾ ಪಂಚಾಯತ್ ಮುಖ್ಯಾಧಿಕಾರಿ ಈಶ್ವರ ಕಾಂದೋ ಕಾರ್ಯದರ್ಶಿ. ಜೊತೆಗೆ 5 ಉಪಾಧ್ಯಕ್ಷರು ಈ ಸಮಿತಿಯಲ್ಲಿದ್ದು, 14 ಸದಸ್ಯರಿದ್ದಾರೆ. ಕಾರವಾರದ ಜಿಲ್ಲಾ ಪಂಚಾಯತದಲ್ಲಿನ ಕೊಠಡಿಯನ್ನು ಈ ಯೋಜನೆಯ ಕಚೇರಿಯನ್ನಾಗಿ ಮಾಡಲಾಗಿದೆ.

ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿನ `ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಚೇರಿ’ ಗುರುವಾರ ಉದ್ಘಾಟನೆಯಾಗಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಇದನ್ನು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು `ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಸಮಿತಿಯ ಎಲ್ಲಾ ಸದಸ್ಯರು ಒಟ್ಟಾಗಿ ಶ್ರಮಿಸಿ ಪ್ರತಿಯೊಬ್ಬರಿಗೂ ತಲುಪಿಸಬೇಕು’ ಎಂದು ಸೂಚಿಸಿದರು. `ಪ್ರಾಧಿಕಾರದ ಪ್ರತಿಯೊಬ್ಬ ಸದಸ್ಯರಿಗೆ ಸರ್ಕಾರ ಜವಾಬ್ದಾರಿ ನೀಡಲಿದೆ. ಆ ಜವಾಬ್ದಾರಿಯನ್ನು ಅರಿತು ಸರ್ಕಾರ ಮತ್ತು ಸಾರ್ವಜನಿಕರ ನಡುವಿನ ಕೊಂಡಿಯಾಗಿ ಸೇವೆ ಸಲ್ಲಿಸಬೇಕು’ ಎಂದವರು ಹೇಳಿದರು.

`ಪ್ರಾಧಿಕಾರದ ಸದಸ್ಯರು ತಾಲೂಕುವಾರು ಸಭೆ ಸೇರಿ ಸ್ಥಳೀಯ ಅಸಾಯಕರು, ಬಡ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ದೊರಕಿಸಿಕೊಡಬೇಕು. ಜೊತೆಗೆ ಸರ್ಕಾರದ ಇತರೆ ಯೋಜನೆಗಳ ಸೌಲಭ್ಯವನ್ನು ತಲುಪಿಸುವ ಕೆಲಸ ಮಾಡಿ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಪ್ರಯತ್ನಿಸಬೇಕು’ ಎಂದರು.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page