6

ಹುಟ್ಟು – ಸಾವಿನಷ್ಟೇ ಮುಖ್ಯ ನೋಂದಣಿ ಪತ್ರ: ಜನನ-ಮರಣ ಲೆಕ್ಕಾಚಾರವೇ ಸರಿಯಾಗಿಲ್ಲ!

2023ರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 18,649 ಜನ ಜನಿಸಿರುವುದು ಹಾಗೂ 11,182 ಜನ ಮರಣ ಹೊಂದಿರುವುದು ಮಾತ್ರ ಸರ್ಕಾರಿ ಕಡತದಲ್ಲಿ ದಾಖಲಾಗಿದ್ದು, ನೋಂದಣಿ ಆಗದ ಎಲ್ಲಾ ಪ್ರಕರಣಗಳನ್ನು ನೋಂದಣಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸೂಚಿಸಿದ್ದಾರೆ.

`ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಸಂಭವಿಸುವ ಜನನ ಮರಣಗಳನ್ನು ನಿಗಧಿತ ಸಮಯದಲ್ಲಿ ಮುಗಿಸಬೇಕು’ ಎಂದವರು ಸೂಚಿಸಿದ್ದಾರೆ.

`ಗ್ರಾಮ ಪಂಚಾಯತ್ ಕಾರ್ಯದರ್ಶಿಗಳನ್ನು ಜನನ ಮರಣ ನೊಂದಣಾಧಿಕಾರಿಗಳನ್ನಾಗಿ ನೇಮಿಸಲಾಗಿದ್ದು, ಗ್ರಾಮ ಪಂಚಾಯತ್‌ನಲ್ಲಿ ಘಟಿಸುವ ಜನನ ಮರಣ ಘಟನೆಗಳನ್ನು 21 ದಿನಗಳ ಒಳಗಾಗಿ ನೋಂದಣಿ ಮಾಡಬೇಕು. ಜೊತೆಗೆ ಉಚಿತವಾಗಿ ಪ್ರಮಾಣಪತ್ರವನ್ನು ವಿತರಿಸಬೇಕು’ ಎಂದವರು ಹೇಳಿದ್ದಾರೆ. ಈ ಕುರಿತಂತೆ ಗ್ರಾಮ ಪಂಚಾಯತ್‌ಗಳಲ್ಲಿ ಸಾರ್ವಜನಿಕರಿಗೆ ಸ್ಪಷ್ಟವಾಗಿ ಗೋಚರಿಸುವಂತೆ ನಾಮಫಲಕ ಅಳವಡಿಸಬೇಕು ಎಂದು ಅವರು ತಾಕೀತು ಮಾಡಿದರು.

`ಅಪಘಾತ, ಆತ್ಮಹತ್ಯೆ, ಕೊಲೆ ಮುಂತಾದ ಪ್ರಕರಣಗಳಲ್ಲಿ ಪೊಲೀಸ್ ಇಲಾಖೆ ದಾಖಲಿಸುವ ಎಫ್ ಐ ಆರ್ ಪ್ರತಿ ಆಧರಿಸಿ ನೋಂದಣಿ ಮಾಡಬೇಕು. ಎಲ್ಲಾ ತಹಶೀಲ್ದಾರ್ ಹಾಗೂ ತಾ ಪಂ ಕಾರ್ಯನಿರ್ವಹಣಾಧಿಕಾರಿಗಳು ಆಗಾಗ ಇದರ ತಪಾಸಣೆ ನಡೆಸಬೇಕು. ಪ್ರತಿ ತಿಂಗಳು ಈ ಬಗ್ಗೆ ಪರಿಶೀಲನಾ ಸಭೆ ನಡೆಸಬೇಕು’ ಎಂದು ಸೂಚಿಸಿದರು.

`ಇನ್ನೂ ಸೇವಾ ಸಿಂಧು ತಂತ್ರಾ0ಶದಲ್ಲಿ ಜನನ ಮರಣ ನೋಂದಣಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಸಲಾಗಿದ್ದು, ಡಿಜಿಟಲ್ ಸಿಗ್ನೇಚರ್ ಬಳಸಿ ಅನುಮೋದನೆ ನೀಡಿರುವ ಜನನ ಮರಣ ಪ್ರಮಾಣಪತ್ರಗಳನ್ನು ಸಾರ್ವಜನಿಕರು ಪಡೆಯಬಹುದು’ ಎಂಬ ಮಾಹಿತಿ ಹಂಚಿಕೊoಡರು.

 

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    You cannot copy content of this page