6

ಕಳಪೆ ಕಾಮಗಾರಿಗೆ ಕಾರಣ ಕೇಳಿದ ಹೋರಾಟಗಾರ

ಶಿರಸಿ: ನಗರದ ರಾಮನಬೈಲ್ ವಾರ್ಡಿನಲ್ಲಿ ಮಳೆಗಾಲದಲ್ಲಿಯೇ ಚರಂಡಿ ಗಟಾರ ನಿರ್ಮಾಣ ಹಾಗೂ ಸಿಡಿ ನಿರ್ಮಾಣ ಕಾಮಗಾರಿ ಕಳಪೆಯಾಗಿದೆ. ಮಳೆಗಾಲದ ಅವಧಿಯಲ್ಲಿಯೇ ಕೆಲಸ ಮಾಡುತ್ತಿರುವುದು ಸಾರ್ವಜನಿಕರ ಅಸಮಧಾನಕ್ಕೆ ಕಾರಣವಾಗಿದೆ. ಮಳೆಗಾಲದಲ್ಲಿಯೂ ಕಾಮಗಾರಿ ನಡೆಸುತ್ತಿರುವ ಬಗ್ಗೆ ಕಾರಣ ಕೇಳಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂಬುದು ಜನರ ದೂರು.

`ಮಳೆಗಾಲದಲ್ಲಿ ಕಾಮಗಾರಿ ನಡೆಸುವುದರಿಂದ ಕೆಲಸ ಗುಣಮಟ್ಟದಿಂದ ಕೂಡಿರುವುದಿಲ್ಲ. ಇದರಿಂದ ಸರ್ಕಾರಿ ಹಣ ಬಳಕೆಯಾದರೂ ಜನರಿಗೆ ಉಪಯೋಗವಾಗುತ್ತಿಲ್ಲ’ ಎಂದು ದಲಿತ ಸಮಿತಿ ಅಧ್ಯಕ್ಷ ಕೃಷ್ಣ ಎಚ್. ಬಳಿಗಾರ ಆಕ್ರೋಶ ವ್ಯಕ್ತಪಡಿಸಿದರು. `ಇಲ್ಲಿ ಶಿರಸಿ ನಗರಸಭೆ ಹಾಗೂ ಗುತ್ತಿಗೆದಾರರು ಅವರಿಚ್ಚೆಯಂತೆ ಕೆಲಸ ಮಾಡುತ್ತಿದ್ದಾರೆ. ಕೂಡಲೇ ಈ ಕಾಮಗಾರಿ ನಿಲ್ಲಿಸಿ ಅವ್ಯವಹಾರದ ಬಗ್ಗೆ ತನಿಖೆ ನಡೆಯಬೇಕು’ ಎಂಬುದು ಅವರ ಆಗ್ರಹ. ಈ ಬಗ್ಗೆ ಜಿಲ್ಲಾಡಳಿತಕ್ಕೂ ಪತ್ರ ಬರೆಯುವುದಾಗಿ ಅವರು ಹೇಳಿದ್ದಾರೆ.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    You cannot copy content of this page