6

ಬೇಡ್ತಿ ದಾರಿಯಲ್ಲಿ ನಿಯಂತ್ರಣ ತಪ್ಪಿದ ಬಸ್ಸು: ಕಾರು ಜಖಂ

ಯಲ್ಲಾಪುರ: ಶಿರಸಿ – ಯಲ್ಲಾಪುರ ರಸ್ತೆಯ ಬೇಡ್ತಿ ತಿರುವಿನಲ್ಲಿ ಕಾರು ಹಾಗೂ ಬಸ್ಸಿನ ನಡುವೆ ಅಪಘಾತವಾಗಿದೆ.

ಗುರುವಾರ ಬೆಳಗ್ಗೆ ಶಿರಸಿ ಮಾರ್ಗವಾಗಿ ತೆರಳುತ್ತಿದ್ದ ಕಾರಿಗೆ ಬಸ್ಸು ಗುದ್ದಿದೆ. ನಂತರ ಆ ಬಸ್ಸು ಅಲ್ಲಿನ ದರೆಗೆ ಡಿಕ್ಕಿಯಾಗಿದೆ. ಈ ಅಪಘಾತದಿಂದ ಕಾರಿನ ಮುಂಭಾಗ ಜಖಂ ಆಗಿದೆ. ಈ ಬಸ್ಸು ಕುಮಟಾ – ಶಿರಸಿ – ದಾಂಡೇಲಿ ಮಾರ್ಗವಾಗಿ ಚಲಿಸಬೇಕಿತ್ತು. ಶಿರಸಿಯಿಂದ ಹೊರಟ ಬಸ್ಸು ಬೇಡ್ತಿ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಅಪಘಾತ ನಡೆದಿದೆ. ಅಪಘಾತದಿಂದಾಗಿ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅಪಘಾತದ ಪರಿಣಾಮ ಕೆಲ ಸಮಯ ಗೊಂದಲದ ವಾತಾವರಣ ಸೃಷ್ಠಿಯಾಗಿತ್ತು. ಆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಕೆಲ ಹೊತ್ತು ಗಾಯಗೊಂಡವರನ್ನು ವಿಚಾರಿಸಿ ನಂತರ ಮುಂದೆ ತೆರಳಿದರು.

 

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page