6

ಜಿಲ್ಲೆಯಲ್ಲಿ 253 ಕಿಮೀ ಉದ್ದದ ಮಾನವ ಸರಪಳಿ: ಲಕ್ಷಕ್ಕೂ ಅಧಿಕ ಜನರು ಭಾಗಿ

`ಪ್ರಜಾಪ್ರಭುತ್ವದ ಆಶಯಗಳಿಗೆ ಪ್ರಜಾಪ್ರಭುತ್ವ ವಿರೋಧಿಗಳಿಂದ ಯಾವುದೇ ಧಕ್ಕೆಯಾಗದಂತೆ ಪ್ರತಿಯೊಬ್ಬ ಸಾರ್ವಜನಿಕರ ಕೂಡಾ ಒಗ್ಗಟ್ಟಾಗಿ ಸಮಾನತೆ ಮತ್ತು ಭ್ರಾತೃತ್ವ ತತ್ವಗಳನ್ನು ಎತ್ತಿ ಹಿಡಿಯುವುದರ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕು’ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು.

ಅವರು ಭಾನುವಾರ ಹೊನ್ನಾವರದ ಮೂಡಗಣಪತಿ ಸಭಾಭವನದಲ್ಲಿ ಆಯೋಜಿಸಲಾದ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

`ಪ್ರಜಾಪ್ರಭುತ್ವ ವ್ಯವಸ್ಥೆಯ ಕುರಿತಂತೆ ಸುಳ್ಳು ಸಂದೇಶ ಸಾರುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಲು ನಡೆಸುವ ಪ್ರಯತ್ನಗಳನ್ನು ಸಾರ್ವಜನಿಕರು ಒಗ್ಗಟ್ಟಾಗಿ ವಿರೋಧಿಸಬೇಕು. ಸಮಾನತೆ, ಗೌರವ, ಒಗ್ಗಟ್ಟು, ಸಾಮರಸ್ಯದಿಂದ ಜನತೆ ಜೀವಿಸಬೇಕು. ಪ್ರಜಾಪ್ರಭುತ್ವ ಮತ್ತು ಸಂವಿಧಾನ ನಮ್ಮ ಅತ್ಯಮೂಲ್ಯ ಆಸ್ತಿ’ ಎಂದರು. `ಪ್ರಜಾಪ್ರಭುತ್ವದ ಕುರಿತಂತೆ ಮುಂದಿನ ಜನಾಂಗಕ್ಕೆ ಅರಿವು ಮತ್ತು ಜಾಗ್ರತೆ ಮೂಡಿಸುವುದು ಅತ್ಯಗತ್ಯವಾಗಿದ್ದು ಶಾಲಾ ಕಾಲೇಜುಗಳಲ್ಲಿ ಪ್ರತಿ ದಿನ ಇವುಗಳ ಬಗ್ಗೆ ತಿಳಿಸುವ ಮೂಲಕ ಸುಭದ್ರ ದೇಶ ನಿರ್ಮಾಣ ಮಾಡಬೇಕು’ ಎಂದರು.

ಪ್ರಾಸ್ತವಿಕವಾಗಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯಾ ಜಿಲ್ಲೆಯಲ್ಲಿ ಹಳಿಯಾಳ ತಾಲ್ಲೂಕಿನ ಮಾವಿನಕೊಪ್ಪದಿಂದ ಭಟ್ಕಳ ತಾಲ್ಲೂಕಿನ ಗೋರಟೆವರೆಗೆ ಒಟ್ಟು 253 ಕಿಮೀ ಉದ್ದದ ಮಾನವ ಸರಪಳಿ ರಚಿಸಿದ್ದು, ಅರಣ್ಯ ಪ್ರದೇಶದಲ್ಲಿ ಮತ್ತು ಅಪಾಯಕಾರಿ ಗುಡ್ಡಕುಸಿತ ಪ್ರದೇಶದಲ್ಲಿ ವಾಹನಗಳಲ್ಲಿ ಧ್ವಜ ರ‍್ಯಾಲಿಯ ಮೂಲಕ ಸರಪಳಿಯನ್ನು ಜೋಡಿಸಲಾಗಿದ್ದು ಜಿಲ್ಲೆಯ 1 ಲಕ್ಷ ಕ್ಕೂ ಅಧಿಕ ಸಾರ್ವಜನಿಕರು ಈ ಕಾರ್ಯಾಕ್ರಮದಲ್ಲಿ ಭಾಗವಹಿಸಿದ್ದಾರೆ. ದೇಶದ ಪ್ರಜೆಗಳು ಶಾಂತಿ, ಸಮಾನತೆ, ಸಹಿಷ್ಣುತೆ, ಸೌಹಾರ್ದತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಹೋದರ ಸಹೋದರಿಯರಂತೆ ಬಾಳಬೇಕು’ ಎಂದರು.

ಮಾನವ ಸರಪಳಿಯಲ್ಲಿ ಪಾಲ್ಗೊಂಡ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಮಾತನಾಡಿ `ಪ್ರಜಾಪ್ರಭುತ್ವದ ಪ್ರತಿಯೊಂದು ಸೂತ್ರವು ನಮ್ಮ ರಾಷ್ಟçದ ಪ್ರಗತಿ ಮತ್ತು ಸೌಹಾರ್ದತೆಯ ಆಧಾರವಾಗಿದೆ’ ಎಂದರು. ಈ ಕಾರ್ಯಕ್ರಮದಲ್ಲಿ ಅಂಕೋಲಾದ ಗೋಖಲೆ ಸೆಂಟನರಿ ಕಾಲೇಜಿನ ಪ್ರಾಂಶುಪಾಲ ಡಾ. ಸಿದ್ದಲಿಂಗಸ್ವಾಮಿ ವಸ್ತದ ಅವರು ಪ್ರಜಾಪ್ರಭುತ್ವದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಹೊನ್ನಾವರದ ಗೇರುಸೊಪ್ಪ ಸರ್ಕಲ್ ಬಳಿ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ, ಡಾ.ಬಿ.ಆರ್ ಅಂಬೇಡ್ಕರ್, ಒನಕೆ ಓಬವ್ವ, ಸುಭಾಷ್ ಚಂದ್ರ ಬೋಸ್, ಕಿತ್ತೂರು ರಾಣಿ ಚೆನ್ನಮ್ಮ, ಭಾರತ ಮಾತೆಯ ವೇಷ ಧರಿಸಿದ್ದ ಪುಟಾಣಿಗಳು, ಹಾಲಕ್ಕಿ ವೇಷಧಾರಿಗಳು ಸಾರ್ವಜನಿಕರ ಗಮನ ಸೆಳೆದರು. ಜಿಲ್ಲೆಯ ಎಲ್ಲಡೆ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಚುನಾಯಿತ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು, ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

  • Related Posts

    ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ

    Share this… Facebook Pinterest Twitter Linkedin Whatsapp*ಗಂಗಾಮತ ಸಮಾಜ ಒಗ್ಗಟ್ಟಾದರೆ ಒಳ್ಳೆಯ ಭವಿಷ್ಯ ಇದೆ: ಬಸವರಾಜ ಬೊಮ್ಮಾಯಿ* *ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬಸವರಾಜ ಬೊಮ್ಮಾಯಿ* ಹಾವೇರಿ: ಗಂಗಾಮತ ಸಮಾಜಕ್ಕೆ ದೊಡ್ಡ ಶಕ್ತಿ ತುಂಬಬೇಕೆಂದರೆ ಎಲ್ಲರೂ ಒಂದಾಗಿ ಒಂದೇ…

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    You cannot copy content of this page