6

ಪೌಷ್ಠಿಕ ಆಹಾರ ಅರಿವಿಗೆ ಪೋಷಣಾ ಅಭಿಯಾನ

ಯಲ್ಲಾಪುರ: ಚಂದ್ಗುಳಿಯಲ್ಲಿ ಗ್ರಾ ಪಂ ಸಭಾಭವನದಲ್ಲಿ ನಡೆದ ಪೋಷಣಾ ಅಭಿಯಾನವನ್ನು ಗ್ರಾ ಪಂ ಸದಸ್ಯ ಸುಬ್ಬಣ್ಣ ಉದ್ದಾಬೈಲ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು `ಮಕ್ಕಳಲ್ಲಿನ ಪೌಷ್ಠಿಕ ಅಂಶ ಹೆಚ್ಚಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಪೋಷಣ ಅಭಿಯಾನಕ್ಕೆ ಒತ್ತು ನೀಡಿದ್ದಾರೆ. ಅದರ ಮುಂದುವರೆದ ಭಾಗವಾಗಿ ಗರ್ಭಿಣಿ ಹಾಗೂ ಬಾಣಂತಿಯರ ಪೌಷ್ಠಿಕತೆಗೆ ಸಹ ಒತ್ತು ನೀಡಲಾಗಿದೆ’ ಎಂದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಪಾಟೀಲ ಮಾತನಾಡಿ `ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ತಲುಪಬೇಕು. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಈ ಅಭಿಯಾನ ನಡೆಯುತ್ತಿದೆ’ ಎಂದರು. ಅಂಗನವಾಡಿ ಕಾರ್ಯಕರ್ತೆಯರೇ ಓಡಾಡಿ ಕಾರ್ಯಕ್ರಮ ಸಂಘಟಿಸಿದ್ದರು.

ಪಿಡಿಓ ರಾಜೇಶ ಶೇಟ್, ಉದ್ಯಮಿ ಮಂಜಣ್ಣ ಜಂಬೇಸಾಲ ಹಾಜರಿದ್ದರು. ಗ್ರಾ ಪಂ ಅಧ್ಯಕ್ಷೆ ಶಿಲ್ಪಾ ನಾಯ್ಕ ಅಧ್ಯಕ್ಷತೆವಹಿಸಿದ್ದರು. ಲಲಿತಾ ಹೆಗಡೆ ನಿರ್ವಹಿಸಿದರು. ಶ್ರೀಲತಾ ಹೆಗಡೆ ಪ್ರಾರ್ಥಿಸಿದರು. ಲತಾ ಪಾಠಣಕರ್ ಸ್ವಾಗತಿಸಿದರು.

  • Related Posts

    ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ

    Share this… Facebook Pinterest Twitter Linkedin Whatsapp*ಗಂಗಾಮತ ಸಮಾಜ ಒಗ್ಗಟ್ಟಾದರೆ ಒಳ್ಳೆಯ ಭವಿಷ್ಯ ಇದೆ: ಬಸವರಾಜ ಬೊಮ್ಮಾಯಿ* *ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬಸವರಾಜ ಬೊಮ್ಮಾಯಿ* ಹಾವೇರಿ: ಗಂಗಾಮತ ಸಮಾಜಕ್ಕೆ ದೊಡ್ಡ ಶಕ್ತಿ ತುಂಬಬೇಕೆಂದರೆ ಎಲ್ಲರೂ ಒಂದಾಗಿ ಒಂದೇ…

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    You cannot copy content of this page