6

ಹೋರಾಟಗಾರರಿಗೆ ಪ್ರತಿಭಟನೆಯ ಹಕ್ಕಿಲ್ಲ!

`ವಿವಿಧ ಕಚೇರಿಗಳಲ್ಲಿ 10 ವರ್ಷಗಳಿಂದ ಬೀಡು ಬಿಟ್ಟಿರುವ ಸರ್ಕಾರಿ ನೌಕರರನ್ನು ಕೂಡಲೇ ವರ್ಗಾಯಿಸಬೇಕು’ ಎಂದು ಆಗ್ರಹಿಸಿ ಭಟ್ಕಳದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದವರಿಗೆ ತಾಲೂಕು ಆಡಳಿತ ನೋಟಿಸ್ ನೀಡಿದೆ.

ಇಲ್ಲಿನ ಹಳೆ ತಹಶೀಲ್ದಾರ್ ಕಚೇರಿ ಎದುರು ರಾಜ್ಯ ಮಾಹಿತಿ ಹಕ್ಕು ಕಾಯ್ದೆ ಪದಾಧಿಕಾರಿಗಳು ಧರಣಿ ನಡೆಸುತ್ತಿದ್ದರು. ಶುಕ್ರವಾರ ರಾತ್ರಿಯಿಡಿ ಪ್ರತಿಭಟನಾಕಾರರು ಕಚೇರಿ ಮುಂದೆ ಕೂತಿದ್ದು, ಶನಿವಾರ ಅವರಿಗೆ ತಾಲೂಕು ಆಡಳಿತ ನೋಟಿಸ್ ಜಾರಿ ಮಾಡಿದೆ. `ಭಟ್ಕಳ ಅತಿ ಸೂಕ್ಷö್ಮ ಪ್ರದೇಶವಾಗಿದ್ದು ಕಾನೂನು ಸುವ್ಯವಸ್ಥೆ ಕಾರಣದಿಂದ ಪ್ರತಿಭಟನೆ ಮುಕ್ತಾಯಗೊಳಿಸಬೇಕು’ ಎಂದು ನೋಟಿಸ್ಸಿನಲ್ಲಿ ಸೂಚಿಸಲಾಗಿದೆ.

ಪ್ರತಿಭಟನೆ ನೇತ್ರತ್ವವಹಿಸಿದ್ದ ಶಂಕರ್ ಅವರಿಗೆ ಕಂದಾಯ ನಿರೀಕ್ಷಕ ವಿಶ್ವನಾಥ್ ನೋಟಿಸ್ ನೀಡಲು ಆಗಮಿಸಿದ್ದರು. ಆದರೆ, ಪ್ರತಿಭಟನಾಕಾರರು ನೋಟಿಸ್ ಸ್ವೀಕರಿಸಲಿಲ್ಲ. ಹೀಗಾಗಿ ಅಲ್ಲಿದ್ದ ಗೋಡೆಗೆ ಅಧಿಕಾರಿಗಳು ನೋಟಿಸ್ ಅಂಟಿಸಿದರು. `ಭಟ್ಕಳದ ಸಹಾಯಕ ಕಮಿಷನರ್ ಕಚೇರಿ ಹಾಗೂ ತಹಶೀಲ್ದಾರ ಕಚೇರಿಯಲ್ಲಿ ಹಲವು ವರ್ಷಗಳಿಂದ ಅಧಿಕಾರಿಗಳು ಬದಲಾಗಿಲ್ಲ. ಅಂಥವರಿoದ ಆಡಳಿತ ಹದಗೆಟ್ಟಿದೆ’ ಎಂದು ದೂರಿ ಪ್ರತಿಭಟನೆ ನಡೆಯುತ್ತಿದೆ.

  • Related Posts

    ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ

    Share this… Facebook Pinterest Twitter Linkedin Whatsapp*ಗಂಗಾಮತ ಸಮಾಜ ಒಗ್ಗಟ್ಟಾದರೆ ಒಳ್ಳೆಯ ಭವಿಷ್ಯ ಇದೆ: ಬಸವರಾಜ ಬೊಮ್ಮಾಯಿ* *ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬಸವರಾಜ ಬೊಮ್ಮಾಯಿ* ಹಾವೇರಿ: ಗಂಗಾಮತ ಸಮಾಜಕ್ಕೆ ದೊಡ್ಡ ಶಕ್ತಿ ತುಂಬಬೇಕೆಂದರೆ ಎಲ್ಲರೂ ಒಂದಾಗಿ ಒಂದೇ…

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    You cannot copy content of this page