6

ಅಧಿಕಾರಿಗಳಿಗೆ ಚಳಿ ಬಿಡಿಸಿದ ಆರ್ ವಿ ದೇಶಪಾಂಡೆ

ಜೋಯಿಡಾ: ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅಧಿಕಾರಿಗಳ ಸಭೆ ನಡೆಸಿದ್ದು, ಕೆಲಸ ಮಾಡದೇ ಕಾಲಹರಣ ಮಾಡುತ್ತಿರುವ ಅಧಿಕಾರಿಗಳಿಗೆ ಚಳಿ ಬಿಡಿಸಿದರು.
`ತೇಲೋಲಿ-ಗೋಡಶೇತ್ ಪಿ.ಎಮ್.ಜಿ.ಎಸ್‌ವೈ ರಸ್ತೆ ಕಾಮಗಾರಿ ಮುಗಿದಿಲ್ಲ. ವೈಯಕ್ತಿಕ ಜಾಗದ ಸಮಸ್ಯೆ ಇರುವುದರಿಂದ ಕಾಮಗಾರಿ ತಡೆಯಾಗಿದೆ. ಇದನ್ನು ತಹಶಿಲ್ದಾರರು ಸ್ಥಳ ಪರಿಶೀಲನೆ ನಡೆಸಿ ಸರಿಪಡಿಸಿಸಬೇಕು. ಬಜಾರಕುಣಂಗ ರಸ್ತೆ ಅರ್ಧಕ್ಕೆ ಬಿಟ್ಟ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ’ ಎಂದು ಗುಡುಗಿದರು.
`ಹಳೆಯ ಕಾಲದಲ್ಲಿ ಅರಣ್ಯ ಅತಿಕ್ರಮಣ ಮಾಡಿದವರಿಗೆ ತೊಂದರೆ ಕೊಡಬೇಡಿ. ನಾನು ಸಹ ಅರಣ್ಯದಲ್ಲಿಯೇ ಬೆಳೆದವನು. ಅರಣ್ಯ ಇಲಾಖೆ ಅನಗತ್ಯವಾಗಿ ಜನರಿಗೆ ತೊಂದರೆ ನೀಡುತ್ತಿದ್ದು ಇದನ್ನು ನಾನು ಸಹಿಸಲ್ಲ’ ಎಂದರು. `ಕಾರ್ಟೋಲಿಯಲ್ಲಿ ವಿದ್ಯುತ್ ಇಲ್ಲದ ಮನೆಗೆ ವಿದ್ಯುತ್ ಪೂರೈಕೆ ಮಾಡಬೇಕು. ಜನರಿಗೆ ವಿದ್ಯುತ್ ನೀಡುವಾಗ ಅರಣ್ಯ ಇಲಾಖೆ ಅಧಿಕಾರಿಗಳು ತೊಂದರೆ ಕೊಡಬಾರದು’ ಎಂದು ಸೂಚಿಸಿದರು.

  • Related Posts

    ‘ಫೇಕ್ ಮತದಾರರ ರಕ್ಷಣೆಗೆ ಸಿಎಂ ಧರಣಿ’ ಬೊಮ್ಮಾಯಿ

    Share this… Facebook Pinterest Twitter Linkedin Whatsappಚುನಾವಣಾ ಆಯೋಗದ ಮುಂದೆ ಸಿಎಂ ಧರಣಿ, ಫೇಕ್ ಮತದಾರರ ರಕ್ಷಣೆಗೆ ಮಾಡಿರುವ ಕುತಂತ್ರ:ಬಸವರಾಜ ಬೊಮ್ಮಾಯಿ ಕಾನೂನಿನಡಿಯಲ್ಲಿ ಕೆಲಸ ಮಾಡುವವರಿಗೆ ಚುನಾವಣಾ ಆಯೋಗ ರಕ್ಷಣೆ ಕೊಡಬೇಕು:ಬಸವರಾಜ ಬೊಮ್ಮಾಯಿ ಬೆಂಗಳೂರು:ಚುನಾವಣೆ ಆಯೋಗದ ಕಚೇರಿ ಮುಂದೆ ಮುಖ್ಯಮಂತ್ರಿಗಳು…

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    Leave a Reply

    Your email address will not be published. Required fields are marked *

    You cannot copy content of this page