6

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ರಾಣೆಬೆನ್ನೂರು: ಮೋಡ ಬಿತ್ತನೆ ವಿಚಾರವಾಗಿ ಬಿಜೆಪಿ ನಾಯಕರಿಗೆ ರಾಣೆಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಟಾಂಗ್ ನೀಡಿದ್ದಾರೆ. ರೈತರ ವಿಚಾರದಲ್ಲಿ ರಾಜಕೀಯ ಮಾಡದೆ, ಮೋಡ ಬಿತ್ತನೆಗೆ ಸಂಬಂಧಿಸಿದ ಮಾನದಂಡಗಳನ್ನು ಸಡಿಲಗೊಳಿಸುವಂತೆ ತಮ್ಮ ಸರ್ಕಾರದ ಬಳಿ ಮನವಿ ಮಾಡುವಂತೆ ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ.

ರಾಣೆಬೆನ್ನೂರಿನಲ್ಲಿ ಮಾತನಾಡಿದ ಶಾಸಕ ಪ್ರಕಾಶ ಕೋಳಿವಾಡ, “ರೈತರ ವಿಚಾರದಲ್ಲಿ ರಾಜಕೀಯ ಮಾಡಬೇಡಿ. ನಿಮ್ಮ ಸರ್ಕಾರದಿಂದ ಮಾನದಂಡ ಸಡಿಲಿಕೆಗೆ ಮನವಿ ಮಾಡಿ. ನಮ್ಮ ಕಾಂಗ್ರೆಸ್ ಎಂಪಿಗಳನ್ನು ನಿಮ್ಮ ಬಳಿ ಕಳಿಸುತ್ತೇವೆ” ಎಂದು ಹೇಳಿದ್ದಾರೆ.

ಮೋಡ ಬಿತ್ತನೆಯಿಂದ ಮಳೆಯಾಗುವುದಿಲ್ಲ ಎಂದು ಕೆಲವರು ಹೇಳುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ವಿಜ್ಞಾನದ ಅರಿವಿಲ್ಲದೆ ಕೆಲವರು ಮಾತನಾಡುತ್ತಾರೆ ಎಂದು ಟೀಕಿಸಿದರು.

ಮೋಡ ಬಿತ್ತನೆ ಕುರಿತು ಕೇಂದ್ರ ಸರ್ಕಾರದ ಸಂಶೋಧನೆ ಹಾಗೂ ಮಾರ್ಗಸೂಚಿಗಳನ್ನು ಉಲ್ಲೇಖಿಸಿದ ಕೋಳಿವಾಡ, 2020ರಲ್ಲಿ ಕೇಂದ್ರ ಸರ್ಕಾರ ಯಾವ ರೀತಿಯಲ್ಲಿ ಮೋಡ ಬಿತ್ತನೆ ಮಾಡಬೇಕು ಎಂಬುದರ ಕುರಿತು ಸೂಚನೆ ನೀಡಿದೆ. ಕೇಂದ್ರ ಸರ್ಕಾರದ SOP ಪ್ರಕಾರವೇ ನಾವು ಮೋಡ ಬಿತ್ತನೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಮೋಡ ಬಿತ್ತನೆಯಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಕುರಿತು ಅಧ್ಯಯನಗಳಲ್ಲಿ ಉಲ್ಲೇಖವಿದೆ ಎಂದು ಹೇಳಿದ ಅವರು, “ಶೇ.46ರಷ್ಟು ಮೋಡ ಬಿತ್ತನೆಯಿಂದ ಮಳೆ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ” ಎಂದು ತಿಳಿಸಿದರು.

ಇದೇ ವೇಳೆ ಮಹಾರಾಷ್ಟ್ರದ ಉದಾಹರಣೆಯನ್ನು ನೀಡಿದ ಶಾಸಕ ಕೋಳಿವಾಡ, ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ತಮ್ಮ ಕಂಪನಿಯ ಕಾರ್ಯವನ್ನು ಹೊಗಳಿದ್ದರು ಎಂದು ಹೇಳಿದರು. ಮಹಾರಾಷ್ಟ್ರದಲ್ಲಿ ಮೋಡ ಬಿತ್ತನೆ ಮಾಡಿದ ಬಳಿಕ ಮಳೆಯಾಗಿದ್ದು, ಅಲ್ಲಿನ ರೈತರು ಪೈಲಟ್‌ ಚಾಲಕನನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ್ದರು ಎಂದು ಅವರು ವಿವರಿಸಿದರು.

“ಜ್ಞಾನ ಇಲ್ಲದೆ ಮಾತನಾಡಿದರೆ ಅದರ ಬಗ್ಗೆ ನಾನು ಮಾತನಾಡಲ್ಲ” ಎಂದು ಬಿಜೆಪಿ ನಾಯಕರ ವಿರುದ್ಧ ಶಾಸಕ ಪ್ರಕಾಶ ಕೋಳಿವಾಡ ತಿರುಗೇಟು ನೀಡಿದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page