ವಿಧಾನಪರಿಷತ್ ಚುನಾವಣೆಯಲ್ಲಿ 4ಕ್ಕೆ 4 ಗೆಲುವು: ಕಾಂಗ್ರೆಸ್‌ಗೆ ಮಾಜಿ ಸಚಿವ ಬಿ.ಸಿ. ಪಾಟೀಲ್ ತಿರುಗೇಟು!
ಹಾವೇರಿ: ವಿಧಾನಪರಿಷತ್ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಉಲ್ಲೇಖಿಸಿ, ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಬಿ.ಸಿ. ಪಾಟೀಲ್ ಅವರು ಕಾಂಗ್ರೆಸ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯಭರಿತ ಪೋಸ್ಟ್ ಹಂಚಿಕೊಂಡಿದ್ದಾರೆ.

“ಕಾಂಗ್ರೆಸ್‌ನ ಸ್ನೇಹಿತರೆ, ಬ್ಯಾಲೆಟ್, ಬ್ಯಾಲೆಟ್, ಬ್ಯಾಲೆಟ್ ಅಂತ ಹೋರಾಟ ಮಾಡಿ ಬ್ಯಾಲೆಟ್‌ನ ಬೆಂಗಳೂರು ಜಿಬಿಎಗೆ ತಂದಿದ್ದೀರಿ. ಬ್ಯಾಲೆಟ್‌ನಲ್ಲಿ ಎಂಎಲ್‌ಸಿ ಚುನಾವಣೆ ನಡೆದಿದೆ. ಈಗ ನೋಡಿ, ಬ್ಯಾಲೆಟಿನ ಹೊಡೆತ ಬುಲೆಟ್‌ಗಿಂತ ಹೆಚ್ಚೈತಲ್ಲ, ಬೇಕಾ ಸಾಕ!” ಎಂದು ಬರೆದುಕೊಂಡಿದ್ದಾರೆ.
ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವ ವಿಚಾರವನ್ನು ಪ್ರಸ್ತಾಪಿಸಿರುವ ಬಿ.ಸಿ. ಪಾಟೀಲ್, ವಿಧಾನಪರಿಷತ್ ಚುನಾವಣೆಯ ಫಲಿತಾಂಶವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ.
ಮಾಜಿ ಸಚಿವರ ಈ ಪೋಸ್ಟ್ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿದೆ.








