6

ಹಿರೇಕೆರೂರು, ರಟ್ಟಿಹಳ್ಳಿಯಲ್ಲಿ ಬಿಜೆಪಿ ವಿಜಯೋತ್ಸವ!

ಸಂಕನೂರ ಗೆಲುವಿನ ಸಂಭ್ರಮ: ಹಿರೇಕೆರೂರು, ರಟ್ಟಿಹಳ್ಳಿಯಲ್ಲಿ ಬಿಜೆಪಿ ವಿಜಯೋತ್ಸವ

ಹಾವೇರಿ: ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಹಾಗೂ ರಾಜ್ಯದ ಇತರ ಕಡೆಗಳಲ್ಲಿ ಬಿಜೆಪಿ ಮತ್ತು ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಹಿರೇಕೆರೂರು ಮತ್ತು ರಟ್ಟಿಹಳ್ಳಿ ಪಟ್ಟಣಗಳಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಹಿರೇಕೆರೂರು ಮತ್ತು ರಟ್ಟಿಹಳ್ಳಿ ಪಟ್ಟಣಗಳಲ್ಲಿ ಎರಡೂ ಮಂಡಲಗಳ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಸಿಹಿ ಹಂಚಿ ಗೆಲುವಿನ ಸಂಭ್ರಮ ವ್ಯಕ್ತಪಡಿಸಿದರು.

ಈ ವಿಜಯೋತ್ಸವದಲ್ಲಿ ಮಾಜಿ ಸಚಿವ ಹಾಗೂ ಹಿರೇಕೆರೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ಪಾಟೀಲ ಭಾಗವಹಿಸಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು.

ಬಿಜೆಪಿ ಮತ್ತು ಎನ್‌ಡಿಎ ಅಭ್ಯರ್ಥಿಗಳ ಗೆಲುವಿನ ಹಿನ್ನೆಲೆಯಲ್ಲಿ ಎರಡೂ ಪಟ್ಟಣಗಳಲ್ಲಿ ಕಾರ್ಯಕರ್ತರು ಸಿಹಿ ಹಂಚುವ ಮೂಲಕ ಸಂತಸ ವ್ಯಕ್ತಪಡಿಸಿದರು.

Related Posts

ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್ ಸ್ಪರ್ಶ: ರೈತ ಸಾವು

Share this… Facebook Pinterest Twitter Linkedin Whatsappಹಾವೇರಿ: ವಿದ್ಯುತ್ ಸ್ಪರ್ಶಿಸಿ ರೈತ ಸಾವು; ಸ್ಥಳಕ್ಕೆ ಶಾಸಕ ಯು.ಬಿ. ಬಣಕಾರ ಭೇಟಿ ಹಾವೇರಿ: ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಳಗಿ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ 62 ವರ್ಷದ…

ಬ್ಯಾಲೆಟ್ ಹೊಡೆತ ಬುಲೆಟ್‌ಗಿಂತ ಜೋರು! bc patil

Share this… Facebook Pinterest Twitter Linkedin Whatsappವಿಧಾನಪರಿಷತ್ ಚುನಾವಣೆಯಲ್ಲಿ 4ಕ್ಕೆ 4 ಗೆಲುವು: ಕಾಂಗ್ರೆಸ್‌ಗೆ ಮಾಜಿ ಸಚಿವ ಬಿ.ಸಿ. ಪಾಟೀಲ್ ತಿರುಗೇಟು! ಹಾವೇರಿ: ವಿಧಾನಪರಿಷತ್ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಉಲ್ಲೇಖಿಸಿ, ಮಾಜಿ…

You cannot copy content of this page