ನೂಲಗೇರಿ ಕೆರೆಗೆ ಮಾಜಿ ಸಚಿವ ಬಿ.ಸಿ. ಪಾಟೀಲರಿಂದ ಬಾಗಿನ ಅರ್ಪಣೆ
ಹಾವೇರಿ: ಸರ್ವಜ್ಞ ಏತ ನೀರಾವರಿ ಯೋಜನೆಯ ಮೂಲಕ ನೂಲಗೇರಿ ಕೆರೆ ಭರ್ತಿಯಾಗಿದ್ದು, ಇದರಿಂದ ರೈತರು ಹಾಗೂ ಸ್ಥಳೀಯ ಜನರಿಗೆ ಅನುಕೂಲವಾಗುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿ.ಸಿ. ಪಾಟೀಲ ಅವರು ನೂಲಗೇರಿ ಕೆರೆಗೆ ಬಾಗಿನ ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ವಜ್ಞ ಏತ ನೀರಾವರಿ ಯೋಜನೆಯಿಂದ ಕೆರೆ ತುಂಬಿರುವುದು ಸಂತಸದ ಸಂಗತಿಯಾಗಿದೆ. ತಾಲೂಕಿನ ಪ್ರತಿಯೊಂದು ಕೆರೆಯೂ ಇದೇ ರೀತಿ ನೀರಿನಿಂದ ತುಂಬಿ, ರೈತರಿಗೆ ಹಾಗೂ ಜನಸಾಮಾನ್ಯರಿಗೆ ಅನುಕೂಲವಾಗಬೇಕು. ಕೆರೆಗಳು ತುಂಬುವುದರಿಂದ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ದೊರೆಯುವುದರ ಜೊತೆಗೆ ಅಂತರ್ಜಲ ಮಟ್ಟವೂ ಹೆಚ್ಚಲು ಸಹಕಾರಿಯಾಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯರು ಹಾಗೂ ರೈತರು ಉಪಸ್ಥಿತರಿದ್ದರು.







