“ಜೋಜು ಜಾರ್ಜ್” ಅಭಿನಯದ ಮಲಯಾಳಂ ಚಿತ್ರ “ಪಣಿ” ಚಿತ್ರದ ಟ್ರೇಲರ್ ಗೆ ಎಲ್ಲರಲ್ಲೂ ಮೆಚ್ಚುಗೆ ಗೆ ವ್ಯಕ್ತವಾಗುತ್ತಿದೆ.
ಕಳೆದ ತಿಂಗಳು ಕೇರಳದಲ್ಲಿ ಬಿಡುಗಡೆಯಾದ ಜೋಜು ಜಾರ್ಜ್ ಅಭಿನಯದ ಮತ್ತು ನಿರ್ದೇಶನದ ‘ಪಣಿ’ ಚಿತ್ರವು ಕನ್ನಡಕ್ಕೆ ಡಬ್ ಆಗಿ ನ. 29ರಂದು ರಾಜ್ಯದ್ಯಂತ ಬಿಡುಗಡೆಯಾಗುತ್ತಿದೆ. ಖ್ಯಾತ ಹೊಂಬಾಳೆ ಫಿಲಂಸ್ ಅವರು ಕರ್ನಾಟಕದಲ್ಲಿ ಈ ಚಿತ್ರವನ್ನು ಕನ್ನಡದಲ್ಲಿ ಬಿಡುಗಡೆ ಮಾಡುತ್ತಿದ್ದಾರೆ.
ಜೋಜು ಜಾರ್ಜ್, ನಿರ್ದೇಶನದ ಈ ಚಿತ್ರವು ಕಳೆದ ತಿಂಗಳು ಮಲಯಾಳಂನಲ್ಲಿ ಬಿಡುಗಡೆಯಾಗಿ ಎಲ್ಲರಲ್ಲೂ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಇದೀಗ ಕನ್ನಡಕ್ಕೆ ಡಬ್ ಆಗಿ ನ. 29 ರಂದು ಕರ್ನಾಟಕದಲ್ಲಿ ಬಿಡುಗಡೆಯಾಗುತ್ತಿದೆ. ಹೊಂಬಾಳೆ ಫಿಲಂಸ್ ಸಂಸ್ಥೆಯು ಕನ್ನಡ ಅವತರಣಿಕೆಯನ್ನು ಬಿಡುಗಡೆ ಮಾಡುತ್ತಿದೆ. ಇದೊಂದು ಮಾಸ್ ಮತ್ತು ಕಮರ್ಷಿಯಲ್ ಚಿತ್ರವಾಗಿದೆ.
ಕೇರಳದಲ್ಲಿ ಬಿಡುಗಡೆಯಾಗಿ ಯಶಸ್ವಿಯಗಿದೆ. ಸೇಡಿನ ಕಥೆಯಾದ್ದರಿಂದ, ಎಲ್ಲಾ ಕಡೆ ಸಲ್ಲುತ್ತದೆ ಎಂಬ ನಂಬಿಕೆ ಇದೆ. ಕನ್ನಡದಲ್ಲೂ ಪ್ರೇಕ್ಷಕರು ಚೆನ್ನಾಗಿ ಸ್ವೀಕರಿಸುತ್ತಾರೆ ಎಂಬ ನಂಬಿಕೆ ಇದೆ. ಇದೊಂದು ಕಾಲ್ಪನಿಕ ಕಥೆಯಾಗಿದ್ದರು ಎರಡು ವರ್ಷಗಳ ಕಾಲ ಚರ್ಚೆ ನಡೆಸಿ ಚಿತ್ರಕಥೆ ಮಾಡಿದ್ದೇವೆ. ಈ ಚಿತ್ರದಲ್ಲಿ ಹೊಸಬರಿದ್ದಾರೆ. ಇದೊಂದು ಸರಳ ಕಥೆಯಾಗಿದ್ದು, ಅದನ್ನು ನೈಜವಾಗಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಮಲಯಾಳಂನಲ್ಲಿ “ಪಣಿ” ಎಂದರೆ ಕೆಲಸ ಎಂದರ್ಥ. ಈ ಹಿಂದೆ ನನ್ನ ಹಲವು ಚಿತ್ರಗಳು ಕರ್ನಾಟಕದಲ್ಲಿ ಬಿಡುಗಡೆಯಾಗಿ, ಯಶಸ್ವಿಯಾಗಿದೆ. ಈ ಚಿತ್ರ ಕೂಡ ಯಶಸ್ವಿಯಾಗಲಿದೆ ಎಂಬ ನಂಬಿಕೆ ಇದೆ.
‘ಹುಡುಗ್ರು’, ‘ಕಿಚ್ಚು’ ಮುಂತಾದ ಕನ್ನಡ ಚಿತ್ರಗಳಲ್ಲಿ ನಟಿಸಿದ್ದ ನಾಯಕಿ ಈಗ ಬಹಳ ದಿನಗಳ ನಂತರ ಬೆಂಗಳೂರಿಗೆ ಬಂದಿದ್ದಾರೆ. ಜೋಜು ಜಾರ್ಜ್ ಲ ಅವರ ಜೊತೆಗೆ ನಟಿಸಿದ್ದಾರೆ. ಈ ಚಿತ್ರದಲ್ಲಿ ಜೋಜು ಅವರ ಪತ್ನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ನಟಿ ಅಭಿನಯ. ಚಿತ್ರದಲ್ಲಿ ಸಾಗರ್ ಸೂರ್ಯ, ಜುನೈಜ್, ಬಾಬ್ಬಿ ಕುರಿಯನ್, ಅಭಯಾ ಹಿರಣ್ಮಯಿ, ರಂಜಿತ್ ವೇಲಾಯುಧನ್ ಮುಂತಾದವರು ಇದ್ದಾರೆ. ಹೊಂಬಾಳೆ ಫಿಲಂಸ್ ವತಿಯಿಂದ ರಾಜೇಶ್ ಈ ಚಿತ್ರ ಕರ್ನಾಟಕದಲ್ಲಿ ಮೂವತ್ತಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.
ಟ್ರೇಲರ್ ಮೆಚ್ಚುಗೆ ಗಳಿಸಿರುವ “ಪಾನಿ” ಚಿತ್ರ ಇದೀಗ ಎಲ್ಲರ ಮನಸೆಳೆಯುತ್ತೆ. ಕನ್ನಡ ಪ್ರೇಕ್ಷಕರು. ಕನ್ನಡ ಅವತರಣಿಕೆಯ ಟ್ರೇಲರ್ ನೋಡುತ್ತಿದ್ದಾರೆ. ನವೆಂಬರ್ 29, 2024 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಜೋಜು ಜಾರ್ಜ್ ಬರೆದು ನಿರ್ದೇಶಿಸಿರುವ “ಪಾನಿ” ಮಲೆಯಾಳದಲ್ಲಿ ಸದ್ದು ಮಾಡುತ್ತಿದೆ