ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಬುಧವಾರ ಬೆಳಗ್ಗೆ ನಗರ ಸಂಚಾರ ನಡೆಸಿದರು. ಸ್ವಾತಂತ್ರೋತ್ಸವದ (Independence Day ) ಅಂಗವಾಗಿ ವಿವಿಧ ಇಲಾಖೆಗಳ ಸಹಯೋಗದಲ್ಲಿ `ಹರ್ ಘರ್ ತಿರಂಗ’ ಕಾರ್ಯಕ್ರಮದ ಅಡಿಯಲ್ಲಿ ನಡೆದ `ವಾಕ್ ಥಾನ್’ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು ನಡಿಗೆ ಶುರು ಮಾಡಿದರು. ಜಿಲ್ಲಾಧಿಕಾರಿಗಳ ಜೊತೆ ನೂರಾರು ಜನ ಕಡಲ ತೀರದಲ್ಲಿ ಹೆಜ್ಜೆ ಹಾಕಿದರು.
ತಮ್ಮ ಕೈಯಲ್ಲಿ ರಾಷ್ಟ್ರಧ್ವಜ ಹಿಡಿದು ಅವರು ದೇಶಪ್ರೇಮದ ಬಗ್ಗೆ ಜಾಗೃತಿ ಮೂಡಿಸಿದರು. ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಅವರ ಜೊತೆ ಹೆಜ್ಜೆ ಹಾಕಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ್ ಕುಮಾರ್ ಕಾಂದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಜೊತೆಯಿದ್ದರು.
ಕಾರವಾರದಲ್ಲಿ ನಡೆದ `ವಾಕ್ ಥಾನ್’ ವಿಡಿಯೋ ಇಲ್ಲಿ ನೋಡಿ..
Discussion about this post