ಕರಾವಳಿ ಭಾಗದಲ್ಲಿ ಸೋಮವಾರ ವ್ಯಾಪಕ ಮಳೆಯಾಗಿದ್ದು, ಹೊನ್ನಾವರ ತಾಲೂಕಿನಲ್ಲಿ ತೆರೆಯಲಾದ 8 ಕಾಳಜಿ ಕೇಂದ್ರಗಳಲ್ಲಿ 313 ಮಂದಿ ಆಶ್ರಯ ಪಡೆದಿದ್ದಾರೆ.
`ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ಊಟದ ವ್ಯವಸ್ಥೆ ಮತ್ತು ರಾತ್ರಿ ತಂಗಲು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದ್ದು, ವೈದ್ಯರ ತಂಡದಿದ ಆರೋಗ್ಯ ಪರಿಶೀಲನೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯವನ್ನು ಒದಗಿಸಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 2 ಮನೆಗಳಿಗೆ ತೀವ್ರ ಹಾನಿ ಹಾಗೂ 13 ಮನೆಗಳಿಗೆ ಭಾಗಶಃ ಹಾನಿಯಾಗಿದೆ.
ಹೊನ್ನಾವರ ತಾಲ್ಲೂಕಿನ ಕಡತೋಕಾ ಗ್ರಾಮದ ಗುದ್ನಕಟ್ಟು ಮಜಿರೆಯು ನೀರಿನ ಹರಿವು ಜಾಸ್ತಿ ಆಗಿದ್ದು , ಇಲ್ಲಿನ ನೇರಪೀಡಿತ ಪ್ರದೇಶದಲ್ಲಿನ 60 ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಜಿಲ್ಲಾಡಳಿತದ ಉಚಿತ ತುರ್ತು ಸಹಾಯವಾಣಿ ಸಂಖ್ಯೆ 1077 ಗೆ ಹಾಗೂ ಮೋ: 9483511015 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
Discussion about this post