ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಪ್ರಮಾಣದ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ಕಾಳಿ ನದಿ ಅಪಾಯದ ಮಟ್ಟ ಮೀರಿ ಹರಿದಿದ್ದು, ಅಣೆಕಟ್ಟುಗಳು ಭರ್ತಿಯಾಗಿದೆ. ಈ ಹಿನ್ನಲೆ ಶುಕ್ರವಾರ ಸಂಜೆ ಕದ್ರಾ ಅಣೆಕಟ್ಟಿನ ನಾಲ್ಕು ಗೇಟುಗಳ ಮೂಲಕ ನೀರನ್ನು ಹೊರಬಿಡಲಾಯಿತು. ಒಟ್ಟು 6 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದ ಕೆಲ ತಗ್ಗು ಪ್ರದೇಶದಲ್ಲಿನ ಜನ ಜೀವನ ಅಸ್ತವ್ಯಸ್ತವಾಗಲಿದ್ದು, ಅವರನ್ನು ಬೇರೆಡೆ ಸ್ಥಳಾಂತರಿಸುವ ಕೆಲಸ ನಡೆದಿದೆ. ಅಗತ್ಯವಿರುವ ಕಡೆ ಕಾಳಜಿ ಕೇಂದ್ರಗಳನ್ನು ತೆರೆದು ಅಲ್ಲಿ ಸಂತ್ರಸ್ತರಿಗೆ ನೆರವು ನೀಡಲು ಜಿಲ್ಲಾಡಳಿತ ಪ್ರಯತ್ನಿಸುತ್ತಿದೆ.
Discussion about this post