ಕರಾವಳಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಹೆದ್ದಾರಿಯಲ್ಲಿ ನೀರು ನಿಂತಿರುವುದರಿoದ ಸಣ್ಣ-ಪುಟ್ಟ ಕಾರು ಜೀಪುಗಳು ಸಂಚರಿಸಲು ಸಾಧ್ಯವೇ ಇಲ್ಲ.
ಹೀಗಾಗಿ ಮಂಗಳವಾರ ಹಿರಿಯ ಅಧಿಕಾರಿಗಳು ಲಾರಿ ಏರಿ ನೆರೆ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿದರು. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೋ ಕಾರವಾರದ ಅರಗಾವರೆಗೆ ತಮ್ಮ ಕಾರಿನಲ್ಲಿ ಸಂಚರಿಸಿದ್ದರು. ಅಲ್ಲಿ ವ್ಯಾಪಕ ಪ್ರಮಾಣದಲ್ಲಿ ನೀರು ನಿಂತಿದ್ದು, ಮುಂದೆ ಕಾರು ಹೋಗುವ ಹಾಗಿರಲಿಲ್ಲ. ಆಗ ಅದೇ ಮಾರ್ಗವಾಗಿ ಸಂಚರಿಸುತ್ತಿದ್ದ ಲಾರಿಗೆ ಕೈ ಮಾಡಿದ ಎಸ್ಪಿ ಎಂ ನಾರಾಯಣ ಅವರು ಮೊದಲು ಲಾರಿ ಹತ್ತಿದರು. ನಂತರ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಹಾಗೂ ಜಿಲ್ಲಾ ಪಂಚಾಯತ ಮುಖ್ಯಾಧಿಕಾರಿ ಈಶ್ವರ ಕಾಂದೋ ಅವರನ್ನು ಲಾರಿಯಲ್ಲಿ ಹತ್ತಿಸಿಕೊಂಡು ಮುಂದೆ ಸಾಗಿದರು. ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಈ ಮೂವರು ಅಧಿಕಾರಿಗಳು ಅಲ್ಲಿ ತಕ್ಷಣ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದರು. ನೆರೆ ಪ್ರವಾಹವನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸಾಕಷ್ಟು ಪ್ರಯತ್ನ ನಡೆಸಿದ್ದು, ಈ ಮೂವರು ಅಧಿಕಾರಿಗಳು ಸಹ ಶಕ್ತಿಮೀರಿ ಶ್ರಮಿಸುತ್ತಿದ್ದಾರೆ.
ಈ ಮೂವರು ಉನ್ನತ ಅಧಿಕಾರಿಗಳು ಲಾರಿಯಲ್ಲಿ ಸಂಚರಿಸಿದ ವಿಡಿಯೋ ಇಲ್ಲಿ ನೋಡಿ..
Discussion about this post