ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, 10 ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಜುಲೈ 16ರ ಮಂಗಳವಾರವೂ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ತಹಶೀಲ್ದಾರರು ಹಾಗೂ ಶಿಕ್ಷಣಾಧಿಕಾರಿಗಳು ನೀಡಿದ ವರದಿ ಪಡೆದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಈ ಘೋಷಣೆ ಮಾಡಿದ್ದಾರೆ. ಹವಾಮಾನ ಇಲಾಖೆ ಸಹ ಮಂಗಳವಾರ ಭಾರೀ ಪ್ರಮಾಣದ ಮಳೆಯಾಗುವ ಬಗ್ಗೆ ಮಾಹಿತಿ ನೀಡಿದೆ. ಸಹಾಯಕ ಆಯುಕ್ತರು ಶಾಲಾ ಮಕ್ಕಳಿಗೆ ಶಾಲೆಗೆ ಹೋಗಲು ತೊಂದರೆ ಆಗುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಶಾಲೆಗಳಿಗೆ ರಜೆ ನೀಡಲಾಗಿದೆ.
ಹಳಿಯಾಳ – ಮುಂಡಗೋಡಿಗೆ ಇಲ್ಲ ರಜೆ
ಕರಾವಳಿ ಭಾಗದಲ್ಲಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿಗೆ ರಜೆ ಘೋಷಣೆಯಾಗಿದೆ. ಮಲೆನಾಡು ಭಾಗದಲ್ಲಿ ಶಿರಸಿ, ಜೊಯಿಡಾ, ದಾಂಡೇಲಿ, ಸಿದ್ದಾಪುರ, ಯಲ್ಲಾಪುರ ತಾಲೂಕಿಗೆ ರಜೆ ನೀಡಲಾಗಿದೆ. ಶಿರಸಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಹಳಿಯಾಳ ಹಾಗೂ ಮುಂಡಗೋಡಿಗೆ ರಜೆ ನಿಯಮ ಅನ್ವಯವಾಗುವುದಿಲ್ಲ.
Discussion about this post