ಕಾರವಾರ: `ಅಭಿವೃದ್ದಿ ಕಾಮಗಾರಿಗಳ ಗುತ್ತಿಗೆವಹಿಸಿಕೊಂಡಿರುವ ಗುತ್ತಿಗೆದಾರರು ಮತ್ತು ಗುತ್ತಿಗೆ ಕಂಪನಿಗಳು ಸಮಯಕ್ಕೆ ಸರಿಯಾಗಿ ಕೆಲಸ ಮುಗಿಸಬೇಕು. ಯಾರಿಗೆ ಅವಧಿಯೊಳಗೆ ಕೆಲಸ ಮುಗಿಸುವ ಅರ್ಹತೆ ಇಲ್ಲವೋ ಅಂಥವರನ್ನು ಕಪ್ಪುಪಟ್ಟಿಗೆ ಸೇರಿಸಲಾಗುತ್ತದೆ” ಎಂದು ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಎಚ್ಚರಿಸಿದರು.
ತ್ರೆöÊ ಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು ಕಾಮಗಾರಿ ಮುಕ್ತಾಯ ಮಾಡದೇ, ಅನಗತ್ಯ ಕಾಲಹರಣ ಮಾಡುತ್ತಿರುವವರ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
`ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 450 ಹಾಸಿಗೆಯ ಆಸ್ಪತ್ರೆಯ ಕಟ್ಟಡ ಕಾಮಗಾರಿಯು ನಿಗಧಿತ ಒಪ್ಪಂದದAತೆ ಮುಕ್ತಾಯಗೊಂಡು ಮಾರ್ಚ್ ತಿಂಗಳಲ್ಲಿ ಕಟ್ಟಡ ಹಸ್ತಾಂತರವಾಗಬೇಕಿತ್ತು. ಆದರೆ ಇಲ್ಲಿಯವರೆಗೆ ಹಸ್ತಾಂತರವಾಗದ ಹಿನ್ನಲೆಯಲ್ಲಿ ರೋಗಿಗಳಿಗೆ ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಇದರಂತೆ ಜಿಲ್ಲೆಯಲ್ಲಿ ಕೈಗೊಂಡಿರುವ ಹಲವು ಅಭಿವೃದ್ದಿ ಕಾಮಗಾರಿಗಳ ಗುತ್ತಿಗೆ ವಹಿಸಿಕೊಂಡಿರುವ ಇತರೆ ಗುತ್ತಿಗೆದಾರರು ಮತ್ತು ಗುತ್ತಿಗೆ ಕಂಪನಿಗಳು ನಿಗಧಿತ ಅವಧಿಯೊಳಗೆ ಕಾಮಗಾರಿಗಳನ್ನು ಮುಕ್ತಾಯಗೊಳಿದೇ ಇದ್ದಲ್ಲಿ ಅವರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಮತ್ತು ಯಾವುದೇ ಕಾರಣಕ್ಕೂ ಟೆಂಡರ್ ಅವಧಿಯನ್ನು ವಿಸ್ತರಣೆ, ನವೀಕರಣ ಸೇರಿದಂತೆ ಬಿಲ್ಲು ಪಾವತಿಯನ್ನೂ ಸಹ ಮಾಡಬಾರದು’ ಎಂದು ಸೂಚಿಸಿದರು.
Discussion about this post