6

ನೂತನ ಸಂಸದರಿಗೆ ನವಿಕೃತ ಕಚೇರಿ!

ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿಯ 2ನೇ ಮಹಡಿಯಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಕಚೇರಿ ತೆರೆಯಲಾಗಿದೆ. ಮಂಗಳವಾರ ಈ ಕಚೇರಿಗೆ ಅವರು ಪ್ರವೇಶಿಸಿದರು.

ಕಳೆದ ನಾಲ್ಕು ವರ್ಷಗಳಿಂದ ಸಂಸದರ ಕಚೇರಿ ಬಾಗಿಲು ತೆರೆದಿರಲಿಲ್ಲ. ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸದರಾದ ನಂತರ ಕಚೇರಿಯ ನವಿಕರಣ ಕಾರ್ಯ ನಡೆದಿದ್ದು, ಮಂಗಳವಾರ ಕಚೇರಿಯ ಉದ್ಘಾಟನೆ ನಡೆಯಿತು. ಮಂಗಳವಾರ ಬೆಳಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಕಚೇರಿಯಲ್ಲಿ ನಡೆದಿದ್ದು, ಇದರಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗಿಯಾಗದರು.

`ಸರ್ಕಾರ ಹಾಗೂ ಸಾರ್ವಜನಿಕರ ಸಂಪರ್ಕ ಕೊಂಡಿಯಾಗಿ ಈ ಕಚೇರಿ ಕೆಲಸ ನಿರ್ವಹಿಸಲಿದೆ. ಸಮಸ್ಯೆಗಳ ಬಗ್ಗೆ ಜನರು ಈ ಕಚೇರಿ ಮೂಲಕವೂ ತಮ್ಮ ಗಮನಕ್ಕೆ ತರಬಹುದು’ ಎಂದು ಈ ವೇಳೆ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. `ಕಚೇರಿ ಇರುವ ಪೂರ್ವದಲ್ಲಿಯೂ ನಮ್ಮ ಆಪ್ತ ಸಹಾಯಕರು ಜನರ ಅಹವಾಲುಗಳನ್ನು ಪಡೆದು ನಮಗೆ ರವಾನಿಸುತ್ತಿದ್ದರು. ಪ್ರಸ್ತುತ ಸಭೆ-ಜನರ ಸಮಸ್ಯೆ ಆಲಿಸಲು ಈ ಕಚೇರಿ ಸಹಾಯಕವಾಗಲಿದೆ’ ಎಂದರು.
ಶಿರಸಿಯಲ್ಲಿ ಸಹ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಚೇರಿಯನ್ನು ಹೊಂದಿದ್ದಾರೆ. ಸಂಸದರ ಕಚೇರಿಯಲ್ಲಿರುವ ಆಪ್ತ ಸಹಾಯಕರ ಫೋನ್ ನಂ: 9448797234

ಕಚೇರಿ ಉದ್ಘಾಟನೆ ನಂತರ ಸಂಸದ ವಿಶ್ವೇಶ್ವರ ಹೆಗಡೆ ಹೇಳಿದ್ದೇನು? ವಿಡಿಯೋ ಇಲ್ಲಿ ನೋಡಿ..

 

  • Related Posts

    ಮೇದಿನಿಯ ಬಾಯಲ್ಲಿ ನಲಿಯುವ ಗೀತೆ

    Share this… Facebook Pinterest Twitter Linkedin Whatsapp ಮಕ್ಕಳು ಮನೆಯ ಹಿರಿಯರನ್ನು, ತಂದೆ-ತಾಯಿಯನ್ನು ಅನುಕರಿಸುತ್ತಾರೆ, ಅನುಸರಿಸುತ್ತಾರೆ. ಹಿರಿಯರು ಏನೇ ಮಾಡಲಿ ಅದನ್ನೇ ತಾನೂ ಮಾಡುವ ಪ್ರಯತ್ನ ಮಾಡುತ್ತಾರೆ. ಅದೇ ಕಾರಣಕ್ಕಾಗಿ ಮಕ್ಕಳೆದುರು ಒಳ್ಳೆಯದನ್ನೇ ಮಾಡಬೇಕು, ಒಳ್ಳೆಯದನ್ನೇ ಮಾತನಾಡಬೇಕು ಎಂದು ಹೇಳುತ್ತಾರೆ.‌…

    ಉಪಯುಕ್ತ ಮಾಹಿತಿ: ಶಿರಸಿಯ ಈ ವೈದ್ಯರೆಲ್ಲರೂ ಆಪತ್ಬಾಂದವರು!

    Share this… Facebook Pinterest Twitter Linkedin Whatsappಮಳೆಗಾಲ ಶುರುವಾದ ತಕ್ಷಣ ಕೆಮ್ಮು-ಶೀತ-ಜ್ವರ ಸಾಮಾನ್ಯ. ಅದರಲ್ಲಿಯೂ ಮಕ್ಕಳ ಬಗ್ಗೆ ಪ್ರತಿಯೊಬ್ಬರಿಗೂ ವಿಶೇಷ ಆರೈಕೆ ಅಗತ್ಯ. ಮಕ್ಕಳು ಮಾತ್ರವಲ್ಲ.. ಗರ್ಭಿಣಿಯರ ಬಗ್ಗೆಯೂ ಕಾಳಜಿವಹಿಸಬೇಕಾದ ಅಂಶಗಳ ಜೊತೆ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರ ಶಿರಸಿ…

    You cannot copy content of this page