6

ಮುರುಡೇಶ್ವರ | ಇನ್ಮುಂದೆ ಎಲ್ಲೆಂದರಲ್ಲಿ ನೀರಿಗಿಳಿಯುವ ಹಾಗಿಲ್ಲ!

ಭಟ್ಕಳ: ಮುರುಡೇಶ್ವರದ ಕಡಲ ತೀರದಲ್ಲಿ ಅವಘಡ ನಡೆದ ಕಾರಣ ಕಡಲತೀರ ಪ್ರವೇಶ ನಿಷೇಧಿಸಲಾಗಿದ್ದು, ನಿಷೇಧಕ್ಕೆ ಸಡಲಿಕೆ ನೀಡಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ಅದಕ್ಕಿಂತ ಮುಖ್ಯವಾಗಿ ಕಡಲತೀರದಲ್ಲಿ `ಸಿಮ್ಮಿಂಗ್ ಝೋನ್’ ಎಂದು ಕೆಲ ಪ್ರದೇಶ ಗುರುತಿಸಿ ಅಲ್ಲಿ ಮಾತ್ರ ನೀರಿಗಿಳಿಯಲು ಅವಕಾಶ ಕಲ್ಪಿಸುವ ಬಗ್ಗೆ ನಿರ್ಧರಿಸಲಾಗಿದೆ.

ಈ ಕುರಿತು ಸೋಮವಾರ ಮಾಧ್ಯಮ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಮಾಹಿತಿ ನೀಡಿದ್ದಾರೆ. ಕಡಲತೀರದ ಉದ್ದಕ್ಕೂ ಭದ್ರತೆ ನೀಡಲು ಸಿಬ್ಬಂದಿ ಕೊರತೆಯಿರುವ ಕಾರಣ ಸೂಚಿಸಿದ ಸ್ಥಳದಲ್ಲಿ ಮಾತ್ರ ಪ್ರವಾಸಿಗರು ನೀರಿಗಿಳಿಯಬೇಕು. ಅಲ್ಲಿ ಭದ್ರತಾ ಸಿಬ್ಬಂದಿ ಇರಲಿದ್ದು, ಪ್ರವಾಸಿಗರ ಸುರಕ್ಷತೆ ಕಾಪಾಡಲಿದ್ದಾರೆ. ಇದರಿಂದ ಸಾವು-ನೋವಿನ ಪ್ರಮಾಣ ಕಡಿಮೆ ಮಾಡಲು ಸಾಧ್ಯ ಎಂಬ ಚಿಂತನೆ ಜಿಲ್ಲಾಡಳಿತದ ಮುಂದಿದೆ.

`ಈಜುಲು ತೆರಳುವ ಪ್ರದೇಶಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಇನ್ನಷ್ಟು ಲೈಫ್‌ಗಾರ್ಡ ಒದಗಿಸಲು ಈ ಹಿಂದೆ ಅನುದಾನ ಕೊರತೆಯಿದ್ದು, ಪ್ರವಾಸೋದ್ಯಮ ಚಟುವಟಿಕೆಗಳಿಂದ ಆದಾಯ ಬಂದಿದೆ. ಇದೀಗ ಅದನ್ನು ಬಳಸಿಕೊಂಡು ಸುರಕ್ಷತೆ ಒದಗಿಸಲಾಗುತ್ತದೆ’ ಎಂದು ತಿಳಿಸಿದರು. ಕಡಲತೀರದಲ್ಲಿನ ಪ್ರವಾಸಿಗರ ರಕ್ಷಣೆಗೆ ಲೈಫ್‌ಗಾರ್ಡ ಸಿಬ್ಬಂದಿ, ಪೊಲೀಸರು ಹಾಗೂ ಗೃಹರಕ್ಷಕ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದರು.

`ಈ ಎಲ್ಲಾ ಪ್ರಕ್ರಿಯೆಗಳನ್ನು ಪಾರದರ್ಶಕವಾಗಿ ನಡೆಸಬೇಕು. ಹೀಗಾಗಿ ಟೆಂಡರ್ ಮೂಲಕವೇ ಇದನ್ನು ಮಾಡಲಾಗುತ್ತದೆ. ಅಲ್ಲಿಯವರೆಗೂ ಪೊಲೀಸರಿಗೆ ಭದ್ರತೆ ಒದಗಿಸಲು ಸೂಚಿಸಲಾಗಿದೆ’ ಎಂದು ವಿವರಿಸಿದರು. `ರಕ್ಷಣಾ ಸಾಮಗ್ರಿ ಒದಗಿಸುವಂತೆ ಸ್ಕೂಬಾ ಡೈವಿಂಗ್ ತಂಡದವರಿಗೆ ಸೂಚಿಸಲಾಗಿದೆ’ ಎಂದರು.
ಜಿಲ್ಲಾಧಿಕಾರಿ ಹೇಳಿದ್ದೇನು? ವಿಡಿಯೋ ಇಲ್ಲಿ ನೋಡಿ..

  • Related Posts

    ಮೇದಿನಿಯ ಬಾಯಲ್ಲಿ ನಲಿಯುವ ಗೀತೆ

    Share this… Facebook Pinterest Twitter Linkedin Whatsapp ಮಕ್ಕಳು ಮನೆಯ ಹಿರಿಯರನ್ನು, ತಂದೆ-ತಾಯಿಯನ್ನು ಅನುಕರಿಸುತ್ತಾರೆ, ಅನುಸರಿಸುತ್ತಾರೆ. ಹಿರಿಯರು ಏನೇ ಮಾಡಲಿ ಅದನ್ನೇ ತಾನೂ ಮಾಡುವ ಪ್ರಯತ್ನ ಮಾಡುತ್ತಾರೆ. ಅದೇ ಕಾರಣಕ್ಕಾಗಿ ಮಕ್ಕಳೆದುರು ಒಳ್ಳೆಯದನ್ನೇ ಮಾಡಬೇಕು, ಒಳ್ಳೆಯದನ್ನೇ ಮಾತನಾಡಬೇಕು ಎಂದು ಹೇಳುತ್ತಾರೆ.‌…

    ಉಪಯುಕ್ತ ಮಾಹಿತಿ: ಶಿರಸಿಯ ಈ ವೈದ್ಯರೆಲ್ಲರೂ ಆಪತ್ಬಾಂದವರು!

    Share this… Facebook Pinterest Twitter Linkedin Whatsappಮಳೆಗಾಲ ಶುರುವಾದ ತಕ್ಷಣ ಕೆಮ್ಮು-ಶೀತ-ಜ್ವರ ಸಾಮಾನ್ಯ. ಅದರಲ್ಲಿಯೂ ಮಕ್ಕಳ ಬಗ್ಗೆ ಪ್ರತಿಯೊಬ್ಬರಿಗೂ ವಿಶೇಷ ಆರೈಕೆ ಅಗತ್ಯ. ಮಕ್ಕಳು ಮಾತ್ರವಲ್ಲ.. ಗರ್ಭಿಣಿಯರ ಬಗ್ಗೆಯೂ ಕಾಳಜಿವಹಿಸಬೇಕಾದ ಅಂಶಗಳ ಜೊತೆ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರ ಶಿರಸಿ…

    You cannot copy content of this page