6

ಹೆದ್ದಾರಿಯಲ್ಲಿ ಹೊತ್ತಿ ಉರಿದ ಲಾರಿ: ಸಕ್ಕರೆ ಗಾಡಿಗೆ ಅಗ್ನಿಸ್ಪರ್ಶ!

ಯಲ್ಲಾಪುರ: ಹುಬ್ಬಳ್ಳಿ – ಅಂಕೋಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಲಾರಿಗೆ ಅಗ್ನಿಸ್ಪರ್ಶವಾಗಿದೆ.

ಮಂಗಳವಾರ ನಸುಕಿನಲ್ಲಿ ಅರಬೈಲ್ ಘಟ್ಟದಲ್ಲಿ ಲಾರಿ ಹೊತ್ತಿ ಉರಿದಿದೆ. ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಅಲ್ಲಿಗೆ ತೆರಳಿ ಬೆಂಕಿ ಆರಿಸುವ ಪ್ರಯತ್ನ ಮಾಡಿದರು. ಆದರೆ, ಪ್ರಯೋಜನವಾಗಲಿಲ್ಲ. ಲಾರಿಯಿಂದ ಹಾರಿ ಚಾಲಕ ಹಾಗೂ ಕ್ಲೀನರ್ ಜೀವ ಉಳಿಸಿಕೊಂಡಿದ್ದಾರೆ.

ಈ ಲಾರಿ ಬಾಗಲಕೋಟೆಯಿಂದ ಕೇರಳಕ್ಕೆ ಸಂಚರಿಸುತ್ತಿತ್ತು. ಅಗ್ನಿ ಅನಾಹುತಕ್ಕೆ ಕಾರಣ ಗೊತ್ತಾಗಲಿಲ್ಲ. ಯಲ್ಲಾಪುರ ಪೊಲೀಸರು ಸಹ ಸ್ಥಳಕ್ಕೆ ತೆರಳಿ ಹೆಚ್ಚಿನ ಅನಾಹುತ ಆಗದಂತೆ ಮುನ್ನಚ್ಚರಿಕೆವಹಿಸಿದರು. ಪಿಎಸ್‌ಐ ಸಿದ್ದಪ್ಪ ಗುಡಿ ಹಾಗೂ ಪೊಲೀಸ್ ಸಿಬ್ಬಂದಿ ಟ್ರಾಫಿಕ್ ಸಮಸ್ಯೆ ಉಂಟಾಗದ0ತೆ ಎಚ್ಚರಿಕೆವಹಿಸಿದರು. ಪ್ರಸ್ತುತ ಟ್ರಾಫಿಕ್ ಸಮಸ್ಯೆ ನಿಯಂತ್ರಣಕ್ಕೆ ಬಂದಿರುವುದರಿoದ ಸಾರ್ವಜನಿಕ ವಾಹನ ಸಂಚಾರಕ್ಕೆ ಸಮಸ್ಯೆ ಇಲ್ಲ.

ಬೆಂಕಿ ತಗುಲಿದ ಪರಿಣಾಮ ಲಾರಿಯಲ್ಲಿದ್ದ ಶೇ 70ಕ್ಕೂ ಅಧಿಕ ಪ್ರಮಾಣದಲ್ಲಿನ ಸಕ್ಕರೆ ಭಸ್ಮವಾಗಿದೆ.
ಲಾರಿ ಹೊತ್ತಿ ಉರಿದ ದೃಶ್ಯಾವಳಿಗಳನ್ನು ಇಲ್ಲಿ ನೋಡಿ..

  • Related Posts

    ಮೇದಿನಿಯ ಬಾಯಲ್ಲಿ ನಲಿಯುವ ಗೀತೆ

    Share this… Facebook Pinterest Twitter Linkedin Whatsapp ಮಕ್ಕಳು ಮನೆಯ ಹಿರಿಯರನ್ನು, ತಂದೆ-ತಾಯಿಯನ್ನು ಅನುಕರಿಸುತ್ತಾರೆ, ಅನುಸರಿಸುತ್ತಾರೆ. ಹಿರಿಯರು ಏನೇ ಮಾಡಲಿ ಅದನ್ನೇ ತಾನೂ ಮಾಡುವ ಪ್ರಯತ್ನ ಮಾಡುತ್ತಾರೆ. ಅದೇ ಕಾರಣಕ್ಕಾಗಿ ಮಕ್ಕಳೆದುರು ಒಳ್ಳೆಯದನ್ನೇ ಮಾಡಬೇಕು, ಒಳ್ಳೆಯದನ್ನೇ ಮಾತನಾಡಬೇಕು ಎಂದು ಹೇಳುತ್ತಾರೆ.‌…

    ಉಪಯುಕ್ತ ಮಾಹಿತಿ: ಶಿರಸಿಯ ಈ ವೈದ್ಯರೆಲ್ಲರೂ ಆಪತ್ಬಾಂದವರು!

    Share this… Facebook Pinterest Twitter Linkedin Whatsappಮಳೆಗಾಲ ಶುರುವಾದ ತಕ್ಷಣ ಕೆಮ್ಮು-ಶೀತ-ಜ್ವರ ಸಾಮಾನ್ಯ. ಅದರಲ್ಲಿಯೂ ಮಕ್ಕಳ ಬಗ್ಗೆ ಪ್ರತಿಯೊಬ್ಬರಿಗೂ ವಿಶೇಷ ಆರೈಕೆ ಅಗತ್ಯ. ಮಕ್ಕಳು ಮಾತ್ರವಲ್ಲ.. ಗರ್ಭಿಣಿಯರ ಬಗ್ಗೆಯೂ ಕಾಳಜಿವಹಿಸಬೇಕಾದ ಅಂಶಗಳ ಜೊತೆ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರ ಶಿರಸಿ…

    You cannot copy content of this page