6

ಬಡವರ ಮೇಲೆ ಅಧಿಕಾರಿಗಳ ದಬ್ಬಾಳಿಕೆ

ಮುಂಡಗೊಡ: ಅನಾದಿಕಾಲದಿಂದಲೂ ಅರಣ್ಯ ಭೂಮಿಯನ್ನು ಸಾಗುವಳಿ ಮಾಡುತ್ತಿರುವ ನಾಗನೂರ ಗ್ರಾಮದ ಅರಣ್ಯವಾಸಿಯಗಳ ಮೇಲೆ ಅರಣ್ಯ ಸಿಬ್ಬಂದಿ ದಬ್ಬಾಳಿಕೆ ನಡೆಸಿದ್ದಾರೆ. `ದೌರ್ಜನ್ಯ ನಡೆಸಿದ ಸಿಬ್ಬಂದಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಆಗ್ರಹಿಸಿದ್ದಾರೆ.
`1976ನೇ ಸಾಲಿನಿಂದ ದೌರ್ಜನ್ಯಕ್ಕೆ ಒಳಗಾದ ಅರಣ್ಯವಾಸಿಯ ಕುಟುಂಬವು ನಾಗನೂರ ಗ್ರಾಮದಲ್ಲಿ 4 ಎಕರೆ ಕ್ಷೇತ್ರದ ಭೂಮಿಯಲ್ಲಿ ಅಲ್ಪಾವಧಿ ಕೃಷಿ ಚಟುವಟಿಕೆ ನಡೆಸುತ್ತಿದ್ದು, ಅಲ್ಲಿನವರು ಅರಣ್ಯ ಹಕ್ಕು ಕಾಯಿದೆಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯು ಅರಣ್ಯ ಹಕ್ಕು ಸಮಿತಿಯಲ್ಲಿ ಪರಿಶೀಲನೆ ಹಂತದಲ್ಲಿದೆ. ಅದಾಗಿಯೂ ಅರಣ್ಯ ಸಿಬ್ಬಂದಿ ಅಲ್ಲಿ ತೆರಳಿ ದಬ್ಬಾಳಿಕೆ ನಡೆಸಿದ್ದಾರೆ’ ಎಂದು ಸಂತ್ರಸ್ತರು ರವೀಂದ್ರರ ಬಳಿ ನೋವು ಹಂಚಿಕೊoಡರು.

ಕಾನೂನು ಉಲ್ಲಂಘನೆ:
ಕಾನೂನು ವ್ಯಾಪ್ತಿಗೆ ಮೀರಿ ಕಾನೂನು ವಿಧಿವಿಧಾನ ಅನುಸರಿಸದೇ ಬಡ ಅರಣ್ಯವಾಸಿ ಕುಟುಂಬಗಳ ಮೇಲೆ ದೌರ್ಜನ್ಯ ನಡೆಸಿದೆ. ಈ ಅರಣ್ಯ ಸಿಬ್ಬಂದಿ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ರವೀಂದ್ರ ನಾಯ್ಕ ಅವರು ಹಿರಿಯ ಅರಣ್ಯಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ನ್ಯಾಯವಾದಿ ರವೀಂದ್ರ ನಾಯ್ಕ ಅತಿಕ್ರಮಣದಾರರ ಪ್ರದೇಶಕ್ಕೆ ಭೇಟಿ ನೀಡಿದ ವಿಡಿಯೋ ಇಲ್ಲಿ ನೋಡಿ..

  • Related Posts

    ಮೇದಿನಿಯ ಬಾಯಲ್ಲಿ ನಲಿಯುವ ಗೀತೆ

    Share this… Facebook Pinterest Twitter Linkedin Whatsapp ಮಕ್ಕಳು ಮನೆಯ ಹಿರಿಯರನ್ನು, ತಂದೆ-ತಾಯಿಯನ್ನು ಅನುಕರಿಸುತ್ತಾರೆ, ಅನುಸರಿಸುತ್ತಾರೆ. ಹಿರಿಯರು ಏನೇ ಮಾಡಲಿ ಅದನ್ನೇ ತಾನೂ ಮಾಡುವ ಪ್ರಯತ್ನ ಮಾಡುತ್ತಾರೆ. ಅದೇ ಕಾರಣಕ್ಕಾಗಿ ಮಕ್ಕಳೆದುರು ಒಳ್ಳೆಯದನ್ನೇ ಮಾಡಬೇಕು, ಒಳ್ಳೆಯದನ್ನೇ ಮಾತನಾಡಬೇಕು ಎಂದು ಹೇಳುತ್ತಾರೆ.‌…

    ಉಪಯುಕ್ತ ಮಾಹಿತಿ: ಶಿರಸಿಯ ಈ ವೈದ್ಯರೆಲ್ಲರೂ ಆಪತ್ಬಾಂದವರು!

    Share this… Facebook Pinterest Twitter Linkedin Whatsappಮಳೆಗಾಲ ಶುರುವಾದ ತಕ್ಷಣ ಕೆಮ್ಮು-ಶೀತ-ಜ್ವರ ಸಾಮಾನ್ಯ. ಅದರಲ್ಲಿಯೂ ಮಕ್ಕಳ ಬಗ್ಗೆ ಪ್ರತಿಯೊಬ್ಬರಿಗೂ ವಿಶೇಷ ಆರೈಕೆ ಅಗತ್ಯ. ಮಕ್ಕಳು ಮಾತ್ರವಲ್ಲ.. ಗರ್ಭಿಣಿಯರ ಬಗ್ಗೆಯೂ ಕಾಳಜಿವಹಿಸಬೇಕಾದ ಅಂಶಗಳ ಜೊತೆ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರ ಶಿರಸಿ…

    Leave a Reply

    Your email address will not be published. Required fields are marked *

    You cannot copy content of this page