6

ಅವೈಜ್ಞಾನಿಕ ರಸ್ತೆ ಕೆಲಸವೇ ಶಿರೂರು ಅವಘಡಕ್ಕೆ ಕಾರಣ: ಸದನದಲ್ಲಿ ಒಪ್ಪಿಕೊಂಡ ಸಂಸದ

ದೆಹಲಿ ಅಧೀವೇಶನದಲ್ಲಿ ಭಾಗವಹಿಸಿರುವ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪಶ್ಚಿಮಘಟ್ಟ ಸಂರಕ್ಷಣೆಯ ಬಗ್ಗೆ ಮಾತನಾಡಿದ್ದು, ಈ ವೇಳೆ ಅಂಕೋಲಾದ ಶಿರೂರಿನಲ್ಲಿ ಆಡ ಗುಡ್ಡ ಕುಸಿತದ ಕುರಿತು ಪ್ರಸ್ತಾಪಿಸಿದರು.
ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ಅಗತ್ಯ ಎಂದು ಅವರು ಪ್ರತಿಪಾದಿಸಿದರು. ಈ ಭಾಗದಲ್ಲಿ ಅಭಿವೃದ್ಧಿ ಕೆಲಸ ಕೈಗೊಳ್ಳುವಾಗ ವೈಜ್ಞಾನಿಕವಾಗಿ ಕೆಲಸ ನಿರ್ವಹಿಸಬೇಕು ಎಂದು ಅವರು ಒತ್ತಾಯಿಸಿದರು. ದುರಂತದಲ್ಲಿ ಸಾವನಪ್ಪಿದವರಿಗೆ ಹಾಗೂ ತೊಂದರೆಗೆ ಒಳಗಾದವರಿಗೆ ವಿಶೇಷ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.
`ವೈಜ್ಞಾನಿಕ ವರದಿ ಆಧರಿಸಿ ಅಭಿವೃದ್ಧಿ ಕೆಲಸ ನಡೆಯಬೇಕು. ಎನ್ ಎಚ್ ಐನ’ವರು ಮಾಡುತ್ತಿರುವ ರಸ್ತೆ ಕೆಲಸ ಅವೈಜ್ಞಾನಿಕವಾಗಿರುವುದು ಹಾಗೂ ವಿಪರೀತ ಮಳೆಯಿಂದ ಈ ದುರಂತವಾಗಿದೆ’ ಎಂದು ಅಧಿವೇಶನಕ್ಕೆ ತಿಳಿಸಿದರು. ಇನ್ನೊಂದು ಎನ್ ಡಿ ಆರ್ ಎಫ್ ತಂಡ ಸ್ಥಳಕ್ಕೆ ಅಗತ್ಯ ಎಂದು ಒತ್ತಾಯಿಸಿದರು.
ಸಂಸತ್ ಅಧಿವೇಶನದಲ್ಲಿ ಸಂಸದ ಕಾಗೇರಿ ಮಾತನಾಡಿದ ವಿಡಿಯೋ ಇಲ್ಲಿ ನೋಡಿ..

  • Related Posts

    ಮೇದಿನಿಯ ಬಾಯಲ್ಲಿ ನಲಿಯುವ ಗೀತೆ

    Share this… Facebook Pinterest Twitter Linkedin Whatsapp ಮಕ್ಕಳು ಮನೆಯ ಹಿರಿಯರನ್ನು, ತಂದೆ-ತಾಯಿಯನ್ನು ಅನುಕರಿಸುತ್ತಾರೆ, ಅನುಸರಿಸುತ್ತಾರೆ. ಹಿರಿಯರು ಏನೇ ಮಾಡಲಿ ಅದನ್ನೇ ತಾನೂ ಮಾಡುವ ಪ್ರಯತ್ನ ಮಾಡುತ್ತಾರೆ. ಅದೇ ಕಾರಣಕ್ಕಾಗಿ ಮಕ್ಕಳೆದುರು ಒಳ್ಳೆಯದನ್ನೇ ಮಾಡಬೇಕು, ಒಳ್ಳೆಯದನ್ನೇ ಮಾತನಾಡಬೇಕು ಎಂದು ಹೇಳುತ್ತಾರೆ.‌…

    ಉಪಯುಕ್ತ ಮಾಹಿತಿ: ಶಿರಸಿಯ ಈ ವೈದ್ಯರೆಲ್ಲರೂ ಆಪತ್ಬಾಂದವರು!

    Share this… Facebook Pinterest Twitter Linkedin Whatsappಮಳೆಗಾಲ ಶುರುವಾದ ತಕ್ಷಣ ಕೆಮ್ಮು-ಶೀತ-ಜ್ವರ ಸಾಮಾನ್ಯ. ಅದರಲ್ಲಿಯೂ ಮಕ್ಕಳ ಬಗ್ಗೆ ಪ್ರತಿಯೊಬ್ಬರಿಗೂ ವಿಶೇಷ ಆರೈಕೆ ಅಗತ್ಯ. ಮಕ್ಕಳು ಮಾತ್ರವಲ್ಲ.. ಗರ್ಭಿಣಿಯರ ಬಗ್ಗೆಯೂ ಕಾಳಜಿವಹಿಸಬೇಕಾದ ಅಂಶಗಳ ಜೊತೆ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರ ಶಿರಸಿ…

    Leave a Reply

    Your email address will not be published. Required fields are marked *

    You cannot copy content of this page