6

ಸೊರಬದಿಂದ ಬಂದವಳು ಶಿರಸಿಯಲ್ಲಿ ಸತ್ತಳು!

ಶಿರಸಿ: ಮೂರು ವರ್ಷದಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ನೇಹಾಭಾನು (23) ಎಂಬಾತರು ಕೋಟೆಕೆರೆ ನೀರಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸೊರಬ ಬಳಿಯ ಆನವಟ್ಟಿಯ ನೇಹಾಭಾನು ಮಾನಸಿಕವಾಗಿ ಅಸ್ವಸ್ಥರಾಗಿದ್ದರು. ಈ ಹಿನ್ನಲೆ ಶಿವಮೊಗ್ಗ, ಬೆಂಗಳೂರು ಸೇರಿ ವಿವಿಧ ಕಡೆ ಅವರಿಗೆ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಗುಣಮುಖವಾಗಿರಲಿಲ್ಲ.

ನ 8ರಂದು ನೇಹಾಭಾನು ತನ್ನ ಅಜ್ಜಿಮನೆಯಾದ ಶಿರಸಿಗೆ ಬಂದಿದ್ದರು. ಇಲ್ಲಿನ ಕಸ್ತೂರಿಬಾ ನಗರದಲ್ಲಿ ಅವರು ವಾಸ್ತವ್ಯ ಹೂಡಿದ್ದರು. ನ 10ರಂದು ಅವರು ಕಣ್ಮರೆಯಾಗಿದ್ದು, ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ನಂತರ ಕೋಟೆಕೆರೆ ನೀರಿನಲ್ಲಿ ಅವರ ಶವ ಕಾಣಿಸಿದೆ.

ನೇಹಾಭಾನು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸ್ ಪ್ರಕರಣ ದಾಖಲಿಸಿದ ಅವರ ತಂದೆ ಜಾವೀದ್ ಸಾಬ್ ಖಾಜಿ ಶವ ಪಡೆದರು.

  • Related Posts

    ನಾನಾ ಪಾಟೇಕರ್ ನಿಧನಕ್ಕೆ : ಬೊಮ್ಮಾಯಿ ಸಂತಾಪ

    Share this… Facebook Pinterest Twitter Linkedin Whatsapp*ನಟ ನಾನಾ ಪಾಟೇಕರ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ* ಬೆಂಗಳೂರು: ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ದುಖವಾಯಿತು. ಹಿಂದಿ ಹಾಗೂ ಮರಾಠಿ…

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    You cannot copy content of this page