6

ಸಹಕಾರ ಸಪ್ತಾಹ: ಮಂಗಲಮೂರ್ತಿ ಸೊಸೈಟಿಗೆ ಪ್ರಶಸ್ತಿಯ ಗರಿ!

ಶಿರಸಿ: ಕೆಡಿಸಿಸಿ ಸಭಾಭವನದಲ್ಲಿ ನಡೆದ ರಾಜ್ಯಮಟ್ಟದ ಸಹಕಾರ ಸಪ್ತಾಹದಲ್ಲಿ ಯಲ್ಲಾಪುರದ ಮ0ಗಲಮೂರ್ತಿ ಕೋ-ಆಪ್ ಕ್ರೆಡಿಟ್ ಸೊಸೈಟಿ’ಗೆ ಪ್ರಶಸ್ತಿ ಸಿಕ್ಕಿದೆ. ಈ ಪ್ರಶಸ್ತಿಯೂ 10 ಸಾವಿರ ರೂ ಬಹುಮಾನ ಹಾಗೂ ಫಲಕವನ್ನು ಒಳಗೊಂಡಿದೆ.

ಶನಿವಾರ ಶಿರಸಿಯಲ್ಲಿ ನಡೆದ ಸಹಕಾರ ಸಪ್ತಾಹ ಸಭಾ ಕಾರ್ಯಕ್ರಮದಲ್ಲಿ ಮ0ಗಲಮೂರ್ತಿ ಕೋ-ಆಪ್ ಕ್ರೆಡಿಟ್ ಸೊಸೈಟಿಯ ಆಡಳಿತ ಮಂಡಳಿ ನಿರ್ದೇಶಕ ಸುಬ್ಬಣ್ಣ ಕು0ಟೇಗುಳಿ, ನವೀನ್ ಕಿರಗಾರಿ ಹಾಗೂ ಮುಖ್ಯಕಾರ್ಯನಿರ್ವಾಹಕ ಎಮ್ ಆರ್ ಭಟ್ಟ ವಡ್ರಮನೆ ಜಂಟಿಯಾಗಿ ಸ್ವೀಕರಿಸಿದರು. ಕೆಡಿಸಿಸಿ ಬ್ಯಾಂಕಿನ ಅಧ್ಯಕ್ಷರೂ ಆದ ಶಾಸಕ ಶಿವರಾಮ ಹೆಬ್ಬಾರ್ ಹಾಗೂ ಉಪಾಧ್ಯಕ್ಷ ಮೊಹನದಾಸ್ ನಾಯಕ್ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ವೇಳೆ ಹಾಜರಿದ್ದ ಕೆಡಿಸಿಸಿ ಬ್ಯಾ0ಕಿನ ವ್ಯವಸ್ಥಾಪಕ ಶ್ರೀಕಾಂತ ಜಿ ಭಟ್ಟ ಸೊಸೈಟಿಯ ಕಾರ್ಯದ ಬಗ್ಗೆ ಮೆಚ್ಚುಗೆಯ ಮಾತನಾಡಿದರು.

ಮ0ಗಲಮೂರ್ತಿ ಕೋ-ಆಪ್ ಕ್ರೆಡಿಟ್ ಸೊಸೈಟಿಯ ಅತ್ಯುತ್ತಮ ಕಾರ್ಯನಿರ್ವಹಣೆಯನ್ನು ಗಮನಿಸಿ ಕೆಡಿಸಿಸಿ ಬ್ಯಾಂಕ್ ಈ ಪ್ರಶಸ್ತಿಯನ್ನು ನೀಡಿದೆ. 2016ರಲ್ಲಿ ಶುರುವಾದ ಈ ಸೊಸೈಟಿಯೂ ತಂತ್ರಜ್ಞಾನ ಅಳವಡಿಕೆ, ಇ-ಸ್ಟಾಂಪಿoಗ್, ಸ್ಪರ್ಧಾತ್ಮಕ ದರದ ಸೇವೆ ನೀಡುವುದರಲ್ಲಿ ಮುಂಚೂಣಿಯಲ್ಲಿದೆ. ಇದರೊಂದಿಗೆ ಸಿಬ್ಬಂದಿಯ ಕಾರ್ಯಕ್ಷಮತೆಯನ್ನು ಪರಿಗಣಿಸಿ ಕೆಡಿಸಿಸಿ ಬ್ಯಾಂಕ್ ಈ ಪ್ರಶಸ್ತಿ ನೀಡಿದೆ.

  • Related Posts

    ನಾನಾ ಪಾಟೇಕರ್ ನಿಧನಕ್ಕೆ : ಬೊಮ್ಮಾಯಿ ಸಂತಾಪ

    Share this… Facebook Pinterest Twitter Linkedin Whatsapp*ನಟ ನಾನಾ ಪಾಟೇಕರ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ* ಬೆಂಗಳೂರು: ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ದುಖವಾಯಿತು. ಹಿಂದಿ ಹಾಗೂ ಮರಾಠಿ…

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    You cannot copy content of this page