6

ಅತಿಯಾದ ಮೋಜು-ಮಸ್ತಿ: ಬೆಂಗಳೂರಿನಿoದ ಬಂದವರು ಸಮುದ್ರಪಾಲು!

ಕುಮಟಾ: ಬೆಂಗಳೂರಿನಿoದ ಬಂದ ಪ್ರವಾಸಿಗರಿಬ್ಬರು ಗೋಕರ್ಣದಲ್ಲಿ ಸಮುದ್ರ ಪಾಲಾಗಿದ್ದಾರೆ. ಅವರನ್ನು ಬದುಕಿಸಿಕೊಳ್ಳುವ ಪ್ರಯತ್ನ ನಡೆಸಿದರೂ ಪ್ರಯೋಜನವಾಗಲಿಲ್ಲ.

ಗುರುವಾರ ಸಂಜೆ ಬೆಂಗಳೂರಿನಿoದ 15 ಜನ ಸ್ನೇಹಿತರು ಗೋಕರ್ಣಕ್ಕೆ ಬಂದಿದ್ದರು. ಮಿಡ್ಲ ಕಡಲತೀರದಲ್ಲಿ ಅವರೆಲ್ಲರೂ ಮೋಜು ಮಸ್ತಿಯಲ್ಲಿ ತೊಡಗಿದ್ದರು. ಅಪಾಯದ ಮುನ್ಸೂಚನೆ ಅರಿಯದೇ ಬೆಂಗಳೂರಿನ ರವಿ (30) ಹಾಗೂ ವಿಜಯನಗರದ ಪ್ರತೀಕ (33) ಸಮುದ್ರದಲ್ಲಿ ಮುನ್ನುಗ್ಗಿದ್ದರು. ಇತರರು ಅವರನ್ನು ಹಿಂಬಾಲಿಸಿದ್ದು, ಅಲ್ಲಿದ್ದ ರಕ್ಷಣಾ ಸಿಬ್ಬಂದಿ ಇತರರನ್ನು ಸಮುದ್ರ ದಡೆಗೆ ಕರೆ ತಂದರು.

ಆದರೆ, ರವಿ ಹಾಗೂ ಪ್ರತೀಕ ಅಪಾಯದ ಸುಳಿಗೆ ಸಿಲುಕಿದ್ದು, ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಅವರಿಬ್ಬರನ್ನು ದಡಕ್ಕೆ ತಂದ ನಂತರವೂ ಬದುಕಬಹುದು ಎಂಬ ಹಿನ್ನಲೆ ತುರ್ತಾಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಸಾಕಷ್ಟು ಪ್ರಮಾಣದಲ್ಲಿ ಉಪ್ಪು ನೀರು ಕುಡಿದಿದ್ದ ಆ ಇಬ್ಬರೂ ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • Related Posts

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    You cannot copy content of this page