6

ವಿದ್ಯುತ್ ಸ್ಪರ್ಶಿಸಿ ಮಗು ಸಾವು: ಮುಖ್ಯ ಶಿಕ್ಷಕರ ಅಮಾನತಿಗೆ ಮುಖ್ಯಮಂತ್ರಿ ಸೂಚನೆ!

ಹಳಿಯಾಳ: ಮುಂಡವಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2ನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ವಿದ್ಯುತ್ ತಂತಿ ತಗುಲಿ ಸಾವನಪ್ಪಿದ ಪ್ರಕರಣ ಮುಖ್ಯಮಂತ್ರಿ ಕಚೇರಿ ತಲುಪಿದೆ.

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಬAಧಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿ ಸೂಚನೆ ನೀಡಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಶಾಲೆಗೆ ಕೆಇಬಿ ಅನುಮತಿ ಇಲ್ಲದೆ ವಿದ್ಯುತ್ ಸಂಪರ್ಕ ಪಡೆದಿರುವುದು ಖಚಿತವಾಗಿದೆ.

ಈ ತಂತಿ ಹಲವು ಕಡೆ ತುಂಡಾಗಿದ್ದು, ಗಂ ಟೇಪ್ ಹಚ್ಚಿ ಅಂಟಿಸಲಾಗಿತ್ತು. ಕೋತಿಗಳು ಅದರ ಮೇಲೆ ನಡೆದಾಡಿದ್ದರಿಂದ ತಂತಿ ನೆಲಕ್ಕೆ ಬಿದ್ದು ವಿದ್ಯುತ್ ಪ್ರವಹಿಸಿದ ಬಗ್ಗೆ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.

ಇದನ್ನು ಓದಿ: ಅಕ್ರಮ ವಿದ್ಯುತ್ ಸಂಪರ್ಕ ಬಾಲಕಿ ಸಾವು

ಈ ವಿಷಯದಲ್ಲಿ ಶಾಲಾ ಮುಖ್ಯ ಶಿಕ್ಷಕ ನಿರ್ಲಕ್ಷ ಎದ್ದು ತೋರಿದ ಹಿನ್ನಲೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮುಖ್ಯ ಶಿಕ್ಷಕರ ಅಮಾನತಿಗೂ ಮುಖ್ಯಮಂತ್ರಿ ಕಚೇರಿ ಸೂಚಿಸಿದೆ.

  • Related Posts

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    You cannot copy content of this page