6

ಸಾವಿನಲ್ಲಿಯೂ ಸಾರ್ಥಕತೆ ಮೆರೆದ ಬಿಜೆಪಿ ನಾಯಕ

ಶಿವಮೊಗ್ಗ: ಹೃದಯಘಾತದಿಂದ ನಿಧನರಾದ ಬಿಜೆಪಿ ನಾಯಕ ಎಂ ಬಿ ಭಾನುಪ್ರಕಾಶ್ ಅವರ ಕಣ್ಣುಗಳನ್ನು ಸಂಬoಧಿಕರು ದಾನ ಮಾಡಿದ್ದಾರೆ. ಆ ಮೂಲಕ ಭಾನುಪ್ರಕಾಶ್ ಅವರ ಕಣ್ಣುಗಳು ಅಂಧರ ಬಾಳಿಗೆ ಬೆಳಕಾಗಿದೆ.
ಸಾವಿನ ನೋವಿನಲ್ಲಿದ್ದರೂ ಅವರ ಕುಟುಂಬಸ್ಥರು ನೇತ್ರದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಗೆ ಕುಟುಂಬಸ್ಥರು ನೇತ್ರದಾನ ಮಾಡಿದ್ದಾರೆ. ಭಾನುಪ್ರಕಾಶ್ ಅವರ ನೇತ್ರದಾನದ ಬಗ್ಗೆ ಶಂಕರ ಕಣ್ಣಿನ ಆಸ್ಪತ್ರೆಯ ವೈದ್ಯ ಮಲ್ಲಿಕಾರ್ಜುನ್ ಖಚಿತಪಡಿಸಿದ್ದಾರೆ.
`ಭಾನುಪ್ರಕಾಶ್ ಅವರು ನಿಧನರಾಗಿರುವುದು ದುಃಖದ ಸಂಗತಿ, ಆದರೆ ಇಂತಹ ದುಃಖದ ಸಂದರ್ಭದಲ್ಲಿಯೂ ಅವರ ಕುಟುಂಬಸ್ಥರು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಕರೆದುಕೊಂಡು ಬಂದು ಕಣ್ಣು ದಾನ ಮಾಡಿದ್ದಾರೆ. ಇದರಿಂದ ಇಬ್ಬರು ಅಂಧರಿಗೆ ಬೆಳಕಾಗಿದ್ದಾರೆ. ಶೀಘ್ರದಲ್ಲೇ ನಾವು ಅವರಿಗೆ ಕಸಿ ಮಾಡುತ್ತೇವೆ’ ಎಂದು ವೈದ್ಯರು ತಿಳಿಸಿದರು.
ಭಾನುಪ್ರಕಾಶ್ ರಾಷ್ಟೀಯ ಸ್ವಯಂ ಸೇವಕ ಸಂಘದ ಸದಸ್ಯರಾಗಿದ್ದು, ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಬಿಜೆಪಿ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿಯೂ ನೇಮಕ ಮಾಡಿತ್ತು. 2001ರಿಂದ 2005ರ ತನಕ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದರು. ಬಳಿಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಗೊಂಡಿದ್ದರು.

  • Related Posts

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    Leave a Reply

    Your email address will not be published. Required fields are marked *

    You cannot copy content of this page