6

ಶಿರೂರು ಗುಡ್ಡ | ಸಣ್ಣ ನೀರಾವರಿ ಇಲಾಖೆಗೆ ಗಂಗಾವಳಿ ಮಣ್ಣು ತೆಗೆಯುವ ಹೊಣೆ!

ಅಂಕೋಲಾ: ಶಿರೂರು ಗುಡ್ಡ ಕುಸಿತದಿಂದ ಗಂಗಾವಳಿ ನದಿಯಲ್ಲಿ ಶೇಖರವಾಗಿರುವ ಮಣ್ಣು ತೆರವು ಮಾಡಲು ಸಣ್ಣ ನೀರಾವರಿ ಇಲಾಖೆ ಆಸಕ್ತಿವಹಿಸಿದೆ. ಇದಕ್ಕೆ ಅಗತ್ಯ ಅನುದಾನ ನೀಡುವುದಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ಹೇಳಿದ್ದಾರೆ.

ಶುಕ್ರವಾರ ಶಿರೂರು ಗುಡ್ಡ ಕುಸಿತದ ಪ್ರದೇಶಕ್ಕೆ ಭೇಟಿ ನೀಡಿದ ಅವರು `ಗುಡ್ಡ ಕುಸಿತದಿಂದ ನದಿಯಲ್ಲಿ ಶೇಖರವಾಗಿರುವ ಮಣ್ಣನ್ನು ತೆರವುಗೊಳಿಸದ್ದಿದ್ದಲ್ಲಿ ಮುಂದಿನ ಮಳೆಗಾಲದಲ್ಲಿ ಈ ಭಾಗದಲ್ಲಿ ಸಮಸ್ಯೆ ಉಂಟಾಗಲಿದೆ. ನದಿಯ ಹರಿವಿನಿಂದ ಮುಂದಿನ ಮಳೆಗಾಲದಲ್ಲಿ ತೊಂದರೆಯಾಗದoತೆ ನೋಡಿಕೊಳ್ಳುವುದು ಅನಿವಾರ್ಯ. ಈ ಹಿನ್ನಲೆ ಅಗತ್ಯ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

`ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತ ತಡೆಗೆ ಸಲ್ಲಿಸಿರುವ ಪ್ರಸ್ತಾವನೆಯ ಬಗ್ಗೆ ಜನವರಿ 16ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕಂದಾಯ ಸಚಿವರೊಂದಿಗೆ ಚರ್ಚಿಸಲಾಗುವುದು. ಹೆಚ್ಚುವರಿ ಹಣ ಬೇಕಿದ್ದರೂ ಬಿಡುಗಡೆ ಮಾಡಲಾಗುವುದು. ಜೊತೆಗೆ ಮತ್ತೆ ಇಂಥ ಘಟನೆ ಮರುಕಳಿಸದಂತೆ ಅಗತ್ಯ ಕ್ರಮ ಜರುಗಿಸಲಾಗವುದು’ ಎಂದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ವರದಾ–ಬೆಡ್ತಿ ನದಿ ಜೋಡಣೆ: ಸಿಎಂಗೆ ಬೊಮ್ಮಾಯಿ ಪತ್ರ..!

    Share this… Facebook Pinterest Twitter Linkedin Whatsappನದಿ ಜೋಡಣೆ ಕುರಿತು ಚರ್ಚಿಸಲು ಸಭೆ ಕರೆಯುವಂತೆ ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ ವರದಾ ಬೆಡ್ತಿ ನದಿ ಜೋಡಣೆಯ ಡಿಪಿಆರ್ ತ್ವರಿತಗತಿಯಲ್ಲಿ ಸಿದ್ದಪಡಿಸಿ ಕೇಂದ್ರಕ್ಕೆ ಕಳುಹಿಸಲು ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ…

    You cannot copy content of this page