6

ಪೋಲೀಸರ ಮೇಲೆ ದುಷ್ಕರ್ಮಿಗಳ ದಾಳಿ: ಡಕಾಯಿತರ ಕಾಲಿಗೆ ಗುಂಡೇಟು!

ಯಲ್ಲಾಪುರ: ಡಕಾಯಿತರನ್ನು ಹಿಡಿಯಲು ತೆರಳಿದ್ದ ಪೊಲೀಸರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿದವರ ಮೇಲೆಯೂ ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ.

ಗುರುವಾರ ಮುಂಡಗೋಡಿನ ಜಮೀರ ಅಹ್ಮದ್ ದುರ್ಗಾವಾಲೆ ಅವರ ಅಪಹರಣವಾಗಿದ್ದು, ದುಷ್ಕರ್ಮಿಗಳು 30‌ ಲಕ್ಷ ರೂ ಹಣಕ್ಕೆ ಬೇಡಿಕೆ ಇಟ್ಟಿದ್ದರು. 18 ಲಕ್ಷ ರೂ ಪಾವತಿಸಿದ ನಂತರ ಎಚ್ಚರಿಕೆ ನೀಡಿ ಅವರನ್ನು ಬಿಟ್ಟು ತೆರಳಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಶುಕ್ರವಾರವೇ ನಾಲ್ವರನ್ನು ಬಂಧಿಸಿದ್ದರು.

ಈ ಪ್ರಕರಣದಲ್ಲಿ ಇನ್ನಷ್ಟು ಆರೋಪಿಗಳಿರುವ ಮಾಹಿತಿ ಹಿನ್ನಲೆ ಮುಂಡಗೋಡು ಪೊಲೀಸರು ಕಲಘಟಗಿಯಿಂದ ದುಷ್ಕರ್ಮಿಗಳನ್ನು ಬೆನ್ನತ್ತಿದ್ದರು. ಇತ್ತ ಯಲ್ಲಾಪುರ ಪೊಲೀಸರು ಡೌಗಿನಾಳದ ಬಳಿ ಆ ತಂಡದವರನ್ನು ಅಡ್ಡಗಟ್ಟಿದರು.

ಶನಿವಾರ ನಸುಗಿನ 4.30ಕ್ಕೆ ಕಾರಿನಲ್ಲಿದ್ದ ಐದು ಡಕಾಯಿತರಿಗೂ ಶರಣಾಗುವಂತೆ ಪೋಲೀಸರು ತಾಕೀತು ಮಾಡಿದರು. ಇದಕ್ಕೆ ಒಪ್ಪದ ದುಷ್ಕರ್ಮಿಗಳು ಪೊಲೀಸರ ಕಡೆ ಕಲ್ಲು ಬೀಸಿದರು. ಚಾಕು, ಕಾರದಪುಡಿಗಳಿಂದ ದಾಳಿ ನಡೆಸಿದರು.‌ ಇದಕ್ಕೆ ಪ್ರತಿಯಾಗಿ ಪೊಲೀಸರು ಗಾಳಿಯಲ್ಲಿ ಎರಡು ಸುತ್ತು ಗುಂಡು ಹೊಡೆದು ಬೆದರಿಸಿದರು.

ಅದಕ್ಕೂ ಬಗ್ಗದೇ ಇದ್ದಾಗ ಆರೋಪಿತರ ಕಾಲಿಗೆ ಗುಂಡು ಹಾರಿಸಿದರು. ಆಗ ಐವರು ಆರೋಪಿತರು ಸಿಕ್ಕಿಬಿದ್ದರು. ಪೊಲೀಸರು ಹಾಗೂ ಡಕಾಯಿತರ ಮೇಲೆ ನಡೆದ ಘರ್ಷಣೆಯಲ್ಲಿ ಮೂವರು ಪೊಲೀಸರಿಗೆ ಗಾಯವಾಗಿದೆ.

ಮುಂಡಗೋಡು ಸಿಪಿಐ ರಂಗನಥ ನೀಲಮನ್ನವರ, ಪಿಎಸ್ಐ ಪರಶುರಾಮ ಹಾಗೂ ಯಲ್ಲಾಪುರ ಪೊಲೀಸ್ ಸಿಬ್ಬಂದಿ ಶಫಿ ಗಾಯಗೊಂಡಿದ್ದಾರೆ. ಕಾಲಿಗೆ ಗುಂಡು ತಾಗಿಸಿಕೊಂಡ ಆರೋಪಿತರಲ್ಲಿ ಇಬ್ಬರು ಕೊಲೆ ಆರೋಪಿಗಳಾಗಿದ್ದು,‌ ತಿಂಗಳ ಹಿಂದೆ ಜೈಲಿನಿಂದ ಹೊರ ಬಂದಿದ್ದರು.

ಐವರಲ್ಲಿ ಇಬ್ಬರು ಡಕಾಯಿತರ ಕಾಲಿನಲ್ಲಿ ಗುಂಡುಗಳಿರುವುದರಿಂದ ಅವರನ್ನು ಕಾರವಾರದ ಕಿಮ್ಸ್’ಗೆ ದಾಖಲಿಸಲಾಗಿದೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ವರದಾ–ಬೆಡ್ತಿ ನದಿ ಜೋಡಣೆ: ಸಿಎಂಗೆ ಬೊಮ್ಮಾಯಿ ಪತ್ರ..!

    Share this… Facebook Pinterest Twitter Linkedin Whatsappನದಿ ಜೋಡಣೆ ಕುರಿತು ಚರ್ಚಿಸಲು ಸಭೆ ಕರೆಯುವಂತೆ ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ ವರದಾ ಬೆಡ್ತಿ ನದಿ ಜೋಡಣೆಯ ಡಿಪಿಆರ್ ತ್ವರಿತಗತಿಯಲ್ಲಿ ಸಿದ್ದಪಡಿಸಿ ಕೇಂದ್ರಕ್ಕೆ ಕಳುಹಿಸಲು ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ…

    You cannot copy content of this page