6

ಒಂದು ಅಪಘಾತ: 9ಕ್ಕೂ ಅಧಿಕ ಸಾವು | ಸಂತೆಗೆ ಹೊರಟವರು ಶವವಾದರು!

ಸಂತೆಗೆ ತರಕಾರಿ ಒಯ್ಯುತ್ತಿದ್ದ ಲಾರಿ ಯಲ್ಲಾಪುರದ ಅರಬೈಲ್ ಪ್ರದೇಶದಲ್ಲಿ ಪಲ್ಟಿಯಾಗಿದೆ.

ಈ ಅಪಘಾತದಲ್ಲಿ ಒಟ್ಟು 9 ಜನ ಸಾವನಪ್ಪಿದ್ದಾರೆ. 16ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.

ಬುಧವಾರ ಬೆಳಗ್ಗೆ ಹುಬ್ಬಳ್ಳಿ – ಅಂಕೋಲಾ ಹೆದ್ದಾರಿ‌ ಮೂಲಕ ಈ ಲಾರಿ ಚಲಿಸುತ್ತಿತ್ತು. ಸವಣೂರಿನಿಂದ ಹೊರಟ ಲಾರಿಯಲ್ಲಿ 40ರಷ್ಟು ಜನರಿದ್ದರು. ಅವರೆಲ್ಲರೂ ತರಕಾರಿ ಮಾರಾಟಕ್ಕಾಗಿ ಕುಮಟಾ ಸಂತೆಗೆ ಹೋಗುತ್ತಿದ್ದರು.

ಹಣ್ಣು-ತರಕಾರಿ ಮೂಟೆಗಳ ಜೊತೆ ಕುಳಿತು ರೈತರು ಹಾಗೂ ವ್ಯಾಪಾರಿಗಳು ಲಾರಿಯಲ್ಲಿ ಸಂಚರಿಸುತ್ತಿದ್ದರು. ಕಾಗೇರಿ ಪೆಟ್ರೋಲ್ ಬಂಕ್ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿತು.

ಪರಿಣಾಮ ಲಾರಿ ಪಲ್ಟಿಯಾಗಿದ್ದು 9 ಜನ ಅಲ್ಲಿಯೇ ಸಾವನಪ್ಪಿದರು. ಅವರ ಶವವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ನಾಲ್ವರು ಮಾತ್ರ ಸುರಕ್ಷಿತವಾಗಿರುವ ಮಾಹಿತಿ ಲಭಿಸಿದೆ. ಪೊಲೀಸರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

  • Related Posts

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    You cannot copy content of this page