6

ದೌರ್ಜನ್ಯ ತಡೆಗೆ ಜಿಲ್ಲಾ ಮಟ್ಟದ ಸಮಿತಿ

ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ನಿಯಮಗಳ ಪ್ರಕಾರ ಅಚ್ಚುಕಟ್ಟಾದ ಜಾಗೃತ ಸಮಿತಿ ರಚಿಸಲು ಉತ್ತರ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. ಈ ಸಮಿತಿಗೆ ಅರ್ಹ ಸದಸ್ಯರಿಗಾಗಿ ಹುಡುಕಾಟ ನಡೆದಿದೆ.

ಅನುಸೂಚಿತ ಜಾತಿಯ ಮೂರು ಜನ ಹಾಗೂ ಅನುಸೂಚಿತ ಬುಡಕಟ್ಟುಗಳಿಗೆ ಸೇರಿದ ಎರಡು ಜನರನ್ನು ಅಧಿಕಾರೇತರ ಸದಸ್ಯರನ್ನಾಗಿ ನೇಮಿಸಿಕೊಳ್ಳಲು ಅವಕಾಶವಿದೆ. ಸರ್ಕಾರೇತರ ಸಂಸ್ಥೆಗಳೊoದಿಗೆ ಸಂಪರ್ಕ ಹೊಂದಿರುವ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳಿಗೆ ಸೇರಿಲ್ಲದ ಇತರೆ ವರ್ಗದ ಮೂರು ಜನ ಅಧಿಕಾರೇತರ ಸದಸ್ಯರನ್ನು ಅರ್ಹತೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

3 ವರ್ಷಗಳ ಕಾಲ ಅವರೆಲ್ಲರೂ ಸಮಿತಿಗೆ ಸದಸ್ಯರಾಗಿರಲಿದ್ದಾರೆ. ಅರ್ಹ ಹಾಗೂ ಆಸಕ್ತರು ನಿಮ್ಮ ತಾಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಮಾತನಾಡಬಹುದು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿದೇಶಕರ ಕಚೇರಿಯಲ್ಲಿ ಅರ್ಜಿಗಳು ಸಿಗುತ್ತವೆ. ಅರ್ಜಿ ಸಲ್ಲಿಕೆಗೆ ಫೆಬ್ರವರಿ 10 ಕೊನೆ ದಿನ.

  • Related Posts

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    You cannot copy content of this page