6

ರಾಜಿಸೂತ್ರದ ರಹಸ್ಯ ಹೇಳಿದ ನ್ಯಾಯ ದೇವತೆ!

`ಕೋರ್ಟು-ಕಚೇರಿ ಅಲೆದಾಟ ನಡೆಸಿ ಸಮಯ ಹಾಗೂ ಹಣ ವ್ಯಯಿಸುವ ಬದಲು ರಾಜಿ ಸೂತ್ರ ಅನುಸರಿಸಿ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ದಿವ್ಯಶ್ರೀ ಸಿ ಎಂ ಹೇಳಿದ್ದಾರೆ.

ಇದರೊಂದಿಗೆ ವಿವಿಧ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿರುವ ಸಣ್ಣ-ಪುಟ್ಟ ಪ್ರಕರಣಗಳನ್ನು ರಾಜಿ ಮೂಲಕ ಬಗೆಹರಿಸಲು ಹಿರಿಯ ಸಿವಿಲ್ ನ್ಯಾಯಾಧೀಶೆ ದಿವ್ಯಶ್ರೀ ಸಿ ಎಂ ಆಸಕ್ತಿವಹಿಸಿದ್ದಾರೆ. ಇದಕ್ಕಾಗಿ ಮಾರ್ಚ 8ರಂದು ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ನ್ಯಾಯಾಲಯದಲ್ಲಿಯೂ `ಲೋಕ ಅದಾಲತ್’ ನಡೆಸಲು ಅವರು ಸಿದ್ಧತೆ ನಡೆಸಿಕೊಂಡಿದ್ದಾರೆ.

`ಈ ಲೋಕ ಅದಾಲತ್‌ನಲ್ಲಿ 7500 ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ’ ಎಂದು ಕಾರವಾರದಲ್ಲಿ ದಿವ್ಯಶ್ರೀ ಸಿ ಎಂ ಸುದ್ದಿಗಾರರಿಗೆ ಹೇಳಿದರು. `ಜಿಲ್ಲೆಯ ವಿವಿಧ ಹಂತದ ನ್ಯಾಯಾಲಯದಲ್ಲಿ ಒಟ್ಟು 38,072 ಪ್ರಕರಣಗಳು ಬಾಕಿ ಇದ್ದು, ಈಗಾಗಲೇ ಇತ್ಯರ್ಥಪಡಿಸಲು ಸಿದ್ದವಿರುವ 907 ಪ್ರಕರಣಗಳಿವೆ. ಕಳೆದ ಬಾರಿ ನಡೆದ ಲೋಕ ಅದಾಲತ್‌ನಲ್ಲಿ 5,495 ಪ್ರಕರಣಗಳನ್ನು ರಾಜಿ ಮೂಲಕ ಬಗೆಹರಿಸಲಾಗಿದೆ’ ಎಂದವರು ತಿಳಿಸಿದರು.

`ಬ್ಯಾಂಕ್ ಪ್ರಕರಣ, ಸಣ್ಣ-ಪುಟ್ಟ ಅಪರಾಧ ಪ್ರಕರಣ, ವಿದ್ಯುತ್-ಆಸ್ತಿ ಕರ, ನೀರಿನ ಬಿಲ್ಲು, ಕಾರ್ಮಿಕ ವಿವಾದ, ಭೂ ಸ್ವಾಧೀನ ಪ್ರಕರಣಗಳನ್ನು ಇಲ್ಲಿ ರಾಜಿ ಮೂಲಕ ಬಗೆಹರಿಸಿಕೊಳ್ಳಬಹುದು. ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಇತರೆ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ರಾಜಿ ಮೂಲಕ ಬಗೆಹರಿಸಲು ಸಾಧ್ಯವಿದೆ’ ಎಂದವರು ವಿವರಿಸಿದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ವರದಾ–ಬೆಡ್ತಿ ನದಿ ಜೋಡಣೆ: ಸಿಎಂಗೆ ಬೊಮ್ಮಾಯಿ ಪತ್ರ..!

    Share this… Facebook Pinterest Twitter Linkedin Whatsappನದಿ ಜೋಡಣೆ ಕುರಿತು ಚರ್ಚಿಸಲು ಸಭೆ ಕರೆಯುವಂತೆ ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ ವರದಾ ಬೆಡ್ತಿ ನದಿ ಜೋಡಣೆಯ ಡಿಪಿಆರ್ ತ್ವರಿತಗತಿಯಲ್ಲಿ ಸಿದ್ದಪಡಿಸಿ ಕೇಂದ್ರಕ್ಕೆ ಕಳುಹಿಸಲು ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ…

    You cannot copy content of this page