6

ನ್ಯಾಯ ಎಲ್ಲಿದೆ? ವಿದ್ಯಾರ್ಥಿನಿ ಸಾವಿನ ಬಗ್ಗೆ ಮುಖ್ಯಮಂತ್ರಿಗೆ ಪ್ರಶ್ನೆ!

ಕಾರವಾರದ ಬಾಲ ಮಂದಿರದಲ್ಲಿದ್ದ ವಿದ್ಯಾರ್ಥಿನಿ ಶ್ವೇತಾ ಪಣಿಕ್ಕರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬoಧಿಸಿದoತೆ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ. ಈ ಸಾವಿಗೆ ನ್ಯಾಯ ಒದಗಿಸಿ ಎಂದು ಅನೇಕರು ಒತ್ತಾಯಿಸುತ್ತಿದ್ದಾರೆ.

ಬಡತನದ ಕಾರಣದಿಂದ ಶ್ವೇತಾ ಫಣ್ಣಿಕರ್ (16) ಬಾಲಕಿಯರ ಬಾಲ ಮಂದಿರ ಸೇರಿದ್ದರು. ಅಲ್ಲಿಯೇ ಉಳಿದು ಅವರು ಓದುತ್ತಿದ್ದರು. ಕಳೆದ ಗುರುವಾರ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯಿದ್ದರೂ ಶ್ವೇತಾ ಅವರು ತೆರಳಿರಲಿಲ್ಲ. ಬಾಲ ಮಂದಿರದ ಕೋಣೆಯಲ್ಲಿ ಅವರು ನೇಣಿಗೆ ಶರಣಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಮರಣಕ್ಕೂ ಮುನ್ನ ಅವರು ಪತ್ರ ಬರೆದಿದ್ದರು.

ವಾರ್ಡನ್ ಹಾಗೂ ಸಿಬ್ಬಂದಿ ನಿತ್ಯ ಹಿಂಸೆ ನೀಡುವುದನ್ನು ಸಹಿಸದೇ ಶ್ವೇತಾ ನೇಣಿಗೆ ಶರಣಾದ ಬಗ್ಗೆ ಅವರ ಪಾಲಕರು ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಹಲವರು ಆಗ್ರಹಿಸಿದ್ದಾರೆ. ಮಾರ್ಚ 15ರಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಈ ಬಗ್ಗೆ ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿದ್ದಾರೆ. `ಈ ಸಾವಿನ ಬಗ್ಗೆ ಅಧಿಕಾರಿಗಳು ಈವರೆಗೂ ಯಾವುದೇ ಕ್ರಮ ಜರುಗಿಸಿಲ್ಲ’ ಎಂದು ಕೇಂದ್ರದ ಅಧ್ಯಕ್ಷ ಆಗ್ನೇಲ್ ಹಾಗೂ ಸುಧಾಕರ್ ನಾಯ್ಕ ದೂರಿದ್ದಾರೆ.

ಮುಖ್ಯಮಂತ್ರಿಗೆ ಪತ್ರ ರವಾನಿಸಿದ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರ

`ಈ ಪ್ರಕರಣದಲ್ಲಿ ನಿರ್ಲಕ್ಷವಹಿಸಿದ ಅಧಿಕಾರಿಯನ್ನು ಕೂಡಲೇ ವಜಾ ಮಾಡಬೇಕು. ಆತ್ಮಹತ್ಯೆಗೆ ಕಾರಣರಾದವರ ಮೇಲೆ ಪ್ರಕರಣ ದಾಖಲಿಸಬೇಕು. ಕಾಲ ಕಾಲಕ್ಕೆ ಮಕ್ಕಳ ಜೊತೆ ಆಪ್ತ ಸಮಾಲೋಚನೆ ನಡೆಸಿ, ಅವರಿಗೆ ಭದ್ರತೆ ಒದಗಿಸಬೇಕು’ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ವರದಾ–ಬೆಡ್ತಿ ನದಿ ಜೋಡಣೆ: ಸಿಎಂಗೆ ಬೊಮ್ಮಾಯಿ ಪತ್ರ..!

    Share this… Facebook Pinterest Twitter Linkedin Whatsappನದಿ ಜೋಡಣೆ ಕುರಿತು ಚರ್ಚಿಸಲು ಸಭೆ ಕರೆಯುವಂತೆ ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ ವರದಾ ಬೆಡ್ತಿ ನದಿ ಜೋಡಣೆಯ ಡಿಪಿಆರ್ ತ್ವರಿತಗತಿಯಲ್ಲಿ ಸಿದ್ದಪಡಿಸಿ ಕೇಂದ್ರಕ್ಕೆ ಕಳುಹಿಸಲು ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ…

    You cannot copy content of this page