6

ದೌರ್ಜನ್ಯ ಕಾಯ್ದೆ: ಸಂತ್ರಸ್ತರಿಗೆ ನ್ಯಾಯ ಒದಗಿಸಲು ಡೀಸಿ ಸೂಚನೆ

ಜಿಲ್ಲೆಯಲ್ಲಿರುವ ಪ ಜಾತಿ ಮತ್ತು ಪಂಗಡದವರ ಕುಂದು ಕೊರತೆಗಳ ಬಗ್ಗೆ ಎಲ್ಲಾ ಉಪ ವಿಭಾಗಮಟ್ಟದಲ್ಲಿ ನಿಯಮಿತವಾಗಿ ನಡೆಸಿ ಅವರ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ ಸೂಚನೆ ನೀಡಿದ್ದಾರೆ.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಪ ಜಾತಿ ಮತ್ತು ಪಂಗಡದವರ ವಿವಿಧ ಸಮಸ್ಯೆಗಳ ಬಗ್ಗೆ ನಿಯಮಿತವಾಗಿ ಸಭೆಗಳನ್ನು ನಡೆಸಿ, ಆ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಪ್ರಸ್ತುತ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಗೆ ಹೊಸದಾಗಿ ನೇಮಕಗೊಂಡಿರುವ ಸದಸ್ಯರು ತಮ್ಮ ತಾಲೂಕು ವ್ಯಾಪ್ತಿಯಲ್ಲಿನ ಪ ಜಾತಿ ಮತ್ತು ಪಂಗಡದವರ ಸಮಸ್ಯೆಗಳನ್ನು ಸಮಿತಿ ಸಭೆಯ ಗಮನಕ್ಕೆ ತರುವಂತೆ ತಿಳಿಸಿದರು.

ಮಿರ್ಜಾನದಲ್ಲಿನ ಅಲೆಮಾರಿ ಕುಟುಂಬಗಳಿಗೆ ಸೂಕ್ತ ದಾಖಲೆಗಳಿದ್ದರೂ ವಸತಿ ಸೌಲಭ್ಯ ದೊರೆಯುತ್ತಿಲ್ಲ. ಈ ಬಗ್ಗೆ ಗಮನ ಹರಿಸುವಂತೆ ಮತ್ತು ಕುಮಟಾ ಸೇರಿದಂತೆ ದಾಂಡೇಲಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಜಾಲಿ ಮತ್ತು ಮಂಕಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಎಸ್.ಸಿ.ಎಸ್.ಟಿ ಸ್ಮಶಾನ ಭೂಮಿ ಇಲ್ಲದ ಬಗ್ಗೆ ಸದಸ್ಯರು ತಿಳಿಸಿದರು. ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಎಸ್ ಸಿ ಎಸ್ ಟಿ ಸ್ಮಶಾನಕ್ಕೆ ಭೂಮಿ ಗುರುತಿಸುವ ಕಾರ್ಯವನ್ನು ಆದ್ಯತೆಯಲ್ಲಿ ಮಾಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯ ನೀಡುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ದೌರ್ಜನ್ಯ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಲ್ಲಿ ಸಂತ್ರಸ್ಥರಿಗೆ ಕೂಡಲೇ ಅಗತ್ಯ ನೆರವು ಒದಗಿಸುವಂತೆ ಮತ್ತು ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ಆದಷ್ಟು ಶೀಘ್ರದಲ್ಲಿ ಇತ್ಯರ್ಥವಾಗುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸಿದ್ದಿ ಜನಾಂಗದವರಿಗೆ ಪೂರೈಕೆಯಾಗುವ ಪೌಷ್ಠಿಕ ಆಹಾರದ ಗುಣಮಟ್ಟದಲ್ಲಿ ವ್ಯತ್ಯಾಸವಾಗದಂತೆ ಎಚ್ಚರವಹಿಸಿ ಎಂದರು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್‌ಮ ವೈ.ಕೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ವರದಾ–ಬೆಡ್ತಿ ನದಿ ಜೋಡಣೆ: ಸಿಎಂಗೆ ಬೊಮ್ಮಾಯಿ ಪತ್ರ..!

    Share this… Facebook Pinterest Twitter Linkedin Whatsappನದಿ ಜೋಡಣೆ ಕುರಿತು ಚರ್ಚಿಸಲು ಸಭೆ ಕರೆಯುವಂತೆ ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ ವರದಾ ಬೆಡ್ತಿ ನದಿ ಜೋಡಣೆಯ ಡಿಪಿಆರ್ ತ್ವರಿತಗತಿಯಲ್ಲಿ ಸಿದ್ದಪಡಿಸಿ ಕೇಂದ್ರಕ್ಕೆ ಕಳುಹಿಸಲು ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ…

    You cannot copy content of this page