6

ಕಾಡಿನ ಮಕ್ಕಳಿಗೆ ಭೂಮಿ ಸಮಸ್ಯೆ: ಮುಖ್ಯಮಂತ್ರಿ ಮೊರೆಹೋದ ಮಾಜಿ ಸಚಿವ!

ಅನಾಧಿಕಾಲದಿಂದಲೂ ಅರಣ್ಯ ಅತಿಕ್ರಮಿಸಿಕೊಂಡಿರುವ ಬಡ ಜನರ ಬಗ್ಗೆ ಹೋರಾಟ ನಡೆಸುತ್ತಿರುವ ಹಿರಿಯ ಸಾಮಾಜಿಕ ಚಿಂತಕ ಕಾಗೋಡ ತಿಮ್ಮಪ್ಪ ಅವರು ಹೋರಾಟದ ಮುಂದಿನ ಹಾದಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

`ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಪಾರಂಪರಿಕ ಅರಣ್ಯವಾಸಿಗಳ ಸಾಗುವಳಿ ಹಕ್ಕಿಗೆ ಸಂಬoಧಿಸಿ ಕಾನೂನುಬಾಹಿರವಾಗಿ ಪುನರ್ ಪರಿಶೀಲನೆ ಮಾಡುತ್ತಿರುವುದನ್ನು ಕೂಡಲೇ ಸ್ಥಗಿತಗೊಳಿಸಬೇಕು’ ಎಂದವರು ಒತ್ತಾಯಿಸಿದ್ದಾರೆ. `ನಿಯಮದಲ್ಲಿ ನಿರ್ದಿಷ್ಟಪಡಿಸಿದ ಸಾಂದರ್ಭಿಕ ಸಾಕ್ಷವನ್ನು ಅರಣ್ಯ ಭೂಮಿ ಹಕ್ಕಿಗೆ ಪರಿಗಣಿಸಲು ನಿರ್ದೆಶನ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

`ಅರಣ್ಯವಾಸಿಗಳಿಗೆ ಈಗಲೂ ಮೂರು ತಲೆಮಾರಿನ ವಯಕ್ತಿಕ ದಾಖಲೆಗೆ ಒತ್ತಾಯಿಸಲಾಗುತ್ತಿದೆ. ಕಾನೂನಿನ 1ನೇ ನಿಯಮದಲ್ಲಿ ನಿರ್ದಿಷ್ಟಪಡಿಸಿದ ಒಂದಕ್ಕಿoತ ಹೆಚ್ಚು ಸಾಂದರ್ಭಿಕ ಸಾಕ್ಷ ಪರಿಗಣಿಸುವದನ್ನು ಗಂಭೀರವಾಗಿ ಪರಿಗಣಿಸಿಲ್ಲ’ ಎಂದವರು ಅಸಮಧಾನವ್ಯಕ್ತಪಡಿಸಿದ್ದಾರೆ. ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರು ಈ ವೇಳೆ ಕಾನೂನುಬಾಹಿರ ಮತ್ತು ಕಾನೂನಿಗೆ ವ್ಯತಿರಿಕ್ತವಾಗಿ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳ ಅರ್ಜಿಗಳನ್ನ ಪುನರ್ ಪರಿಶೀಲನೆ ನಡೆದಿರುವುದನ್ನು ಆಕ್ಷೇಪಿಸಿದ್ದಾರೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ವರದಾ–ಬೆಡ್ತಿ ನದಿ ಜೋಡಣೆ: ಸಿಎಂಗೆ ಬೊಮ್ಮಾಯಿ ಪತ್ರ..!

    Share this… Facebook Pinterest Twitter Linkedin Whatsappನದಿ ಜೋಡಣೆ ಕುರಿತು ಚರ್ಚಿಸಲು ಸಭೆ ಕರೆಯುವಂತೆ ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ ವರದಾ ಬೆಡ್ತಿ ನದಿ ಜೋಡಣೆಯ ಡಿಪಿಆರ್ ತ್ವರಿತಗತಿಯಲ್ಲಿ ಸಿದ್ದಪಡಿಸಿ ಕೇಂದ್ರಕ್ಕೆ ಕಳುಹಿಸಲು ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ…

    You cannot copy content of this page