6

ಜೊಯಿಡಾ | ಈ ತಾಲೂಕು ಸಂಪೂರ್ಣ ಸಾವಯವ: ಉಳುಮೆ ಮಾಡಿ ಘೋಷಣೆ ಹೊರಡಿಸಿದ ಕೃಷಿ ಸಚಿವ

`ಜೊಯಿಡಾದಲ್ಲಿನ ಕೃಷಿಭೂಮಿಯಲ್ಲಿ ರಾಸಾಯನಿಕ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಊರನ್ನು ದೇಶದ ಮೊದಲ ಸಾವಯವ ಕೃಷಿ ತಾಲೂಕನ್ನಾಗಿ ಪರಿವರ್ತಿಸಲಾಗುತ್ತದೆ’ ಎಂದು ಕೃಷಿ ಸಚಿವ ಎನ್ ಚಲವರಾಯ ಸ್ವಾಮಿ ಘೋಷಿಸಿದ್ದಾರೆ.

ಮಂಗಳವಾರ ಜೊಯಿಡಾದಲ್ಲಿ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್ ವಿ ದೇಶಪಾಂಡೆ ಅವರ ಜೊತೆಗೂಡಿ ಕೃಷಿ ಸಚಿವ ಎನ್ ಚಲವರಾಯ ಸ್ವಾಮಿ ಅವರು ಉಳುಮೆ ಮಾಡಿದರು. ಅದಾದ ನಂತರ ಜೋಯಿಡಾ ತಾಲೂಕನ್ನು ಸಾವಯವ ತಾಲೂಕಾಗಿ ಪರಿವರ್ತಿಸುವ ಸಮಾರಂಭಕ್ಕೆ ಚಾಲನೆ ನೀಡಿದರು. `ಜೋಯಿಡಾ ತಾಲೂಕು ಶೇ 70ರಷ್ಟು ಅರಣ್ಯದಿಂದ ಕೂಡಿದ್ದು ಇಲ್ಲಿನ ವಾತಾವರಣ ಬೇರೆ ಕಡೆ ಎಲ್ಲೂ ನೋಡಲು ಸಾಧ್ಯವಿಲ್ಲ. ನೈಸರ್ಗಿಕವಾದ ಭೂಮಿ, ಅರಣ್ಯ ಪ್ರದೇಶ, ಪರಿಸರ ನೈಸರ್ಗಿಕ ಸಂಪತ್ತಿನಿoದ ಕೂಡಿದ ಈ ಊರಿನ ಜನ ರಾಸಾಯನಿಕವಲ್ಲದ ಕೃಷಿ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು’ ಎಂದು ಕರೆ ನೀಡಿದರು.

`ಈ ಹಿಂದೆ ಸಾವಯವ ಗೊಬ್ಬರಗಳನ್ನು ಬಳಸಿಕೊಂಡು ಕೃಷಿ ಬೆಳೆಗಳನ್ನು ಬೆಳೆಯಲಾಗುತ್ತಿತ್ತು. ನಂತರ ರಸಾಯನಿಕ ಗೊಬ್ಬರಗಳಿಗೆ ಜನ ಒತ್ತು ನೀಡಿದ್ದು, ಇದರ ದುಷ್ಪರಿಣಾಮದ ಬಗ್ಗೆ ಸಾಕಷ್ಟು ಬಾರಿ ಕೃಷಿ ತಜ್ಞರು ಎಚ್ಚರಿಕೆ ನೀಡಿದ್ದಾರೆ. ರೈತರು ರಾಸಾಯನಿಕ ಗೊಬ್ಬರ ಬಳಸುವುದನ್ನು ನಿಲ್ಲಿಸಿ, ಸಾವಯವ ಕೃಷಿ, ನೈಸರ್ಗಿಕ ಕೃಷಿ, ಸಿರಿಧ್ಯಾನದ ಬೆಳೆಗಳನ್ನು ಬೆಳೆಯುವ ಮೂಲಕ ರಾಸಾಯನಿಕದಿಂದ ಹೊರಬರಬೇಕು’ ಎಂದರು. `ರಸಾಯನಿಕ ಗೊಬ್ಬರ ಮತ್ತು ಔಷಧಿಗಳನ್ನು ಉಪಯೋಗಿಸುವುದರಿಂದ ಮಣ್ಣಿನ ಫಲವತ್ತತೆ, ಕಡಿಮೆ ಇಳುವರಿ, ಬೆಳೆ ನಾಶ ಮತ್ತು ಮನುಷ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ. ಇದನ್ನು ತಪ್ಪಿಸಲು ಕೃಷಿ ಪದ್ದತಿಯಲ್ಲಿ ಪೂರ್ಣ ಪ್ರಮಾಣದಲ್ಲಿ ಸಾವಯವ ಬದಲಾವಣೆ ಮಾಡಿಕೊಳ್ಳುವ ಅಗತ್ಯವಾಗಿದೆ’ ಎಂದರು. `ರಾಜ್ಯದಲ್ಲಿ 224 ವಿಧಾನಸಭಾ ಕ್ಷೇತ್ರದಲ್ಲೂ ಕೃಷಿ ಹೊಂಡ ನಿರ್ಮಿಸಲು ತೀರ್ಮಾನಿಸಲಾಗಿದೆ. ಈಗಾಗಲೇ 24000 ಕೃಷಿ ಹೊಂಡ ಮಾಡಲಾಗಿದೆ. ಇನ್ನೂ ಮುಂದೆ ಹೆಚ್ಚಿನ ಕೃಷಿ ಹೊಂಡಗಳನ್ನು ನಿರ್ಮಿಸಲಾಗುವುದು. ಕಬ್ಬು ಬೆಳೆಗಾರರಿಗೆ ಕಬ್ಬು ಕಟ್ಟಾವು ಮಾಡಲು ಯಂತ್ರೋಪಕರಣಕ್ಕೆ ಖರೀದಿಸಲು 50 ಲಕ್ಷ ರೂವರೆಗೂ ಸಬ್ಸಿಡಿ ನೀಡಲಾಗುತ್ತಿದೆ’ ಎಂಬ ವಿಷಯ ತಿಳಿಸಿದರು.

ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಶಾಸಕ ಆರ್ ವಿ ದೇಶಪಾಂಡೆ ಮಾತನಾಡಿ `ಜೊಯಿಡಾ
ತಾಲೂಕಿನಲ್ಲಿ 2779 ಕೃಷಿ ಜಮೀನಿನ ಪೈಕಿ ಎರಡು ಸಾವಿರ ಹೆಕ್ಟೇರ್ ಅಲ್ಲಿ ಭತ್ತ, 60 ಹೆಕ್ಟೇರ್ ಅಲ್ಲಿ ಕಬ್ಬು ಬೆಳೆಯುತ್ತಿದ್ದಾರೆ. ವರ್ಷಕ್ಕೆ ಆರು ಸಾವಿರ ಕೆ ಜಿ ಜೇನು ಉತ್ಪಾದನೆ ಆಗುತ್ತಿದೆ. ತಾಲೂಕಿನಲ್ಲಿ ಕೇವಲ ಶೇ 6.7ಅಷ್ಟೇ ರಾಸಾಯನಿಕ ಬಳಕೆ ಆಗುತ್ತಿದೆ. ಅದೂ ಕಡಿಮೆ ಮಾಡಬೇಕು ಎಲ್ಲರೂ ಸಾವಯವ ತಾಲೂಕು ಮಾಡಲು ಸಿದ್ಧರಾಗಬೇಕು’ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಆಯುಕ್ತ ವೈ ಎಸ್ ಪಾಟೀಲ್, ಕೃಷಿ ಇಲಾಖೆ ನಿರ್ದೇಶಕ ಜಿ ಟಿ ಪುತ್ರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಜೋಯಿಡಾ ಗ್ರಾಮ ಪಂಚಾಯತಿ ಅಧ್ಯಕ್ಷೆ ಚಂದ್ರಿಮಾ ತುಕಾರಾಮ ಮಿರಾಶಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಪ್ರಸಾದ್ ಗಾಂವಕರ್, ಜಿಎಸ್‌ಸ್ ಸಂಸ್ಥೆಯ ನಮೃತಾ ಮತ್ತಿತರರು ಉಪಸ್ಥಿತರಿದ್ದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ವರದಾ–ಬೆಡ್ತಿ ನದಿ ಜೋಡಣೆ: ಸಿಎಂಗೆ ಬೊಮ್ಮಾಯಿ ಪತ್ರ..!

    Share this… Facebook Pinterest Twitter Linkedin Whatsappನದಿ ಜೋಡಣೆ ಕುರಿತು ಚರ್ಚಿಸಲು ಸಭೆ ಕರೆಯುವಂತೆ ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ ವರದಾ ಬೆಡ್ತಿ ನದಿ ಜೋಡಣೆಯ ಡಿಪಿಆರ್ ತ್ವರಿತಗತಿಯಲ್ಲಿ ಸಿದ್ದಪಡಿಸಿ ಕೇಂದ್ರಕ್ಕೆ ಕಳುಹಿಸಲು ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ…

    You cannot copy content of this page