6

ಗ್ರಾಮೀಣ ಸಮಸ್ಯೆಗಳ ಬಗ್ಗೆ ಇಲ್ಲಿ ದೂರು ಕೊಡಿ!

ಸಾರ್ವಜನಿಕರ ಸಮಸ್ಯೆ ಆಲಿಸಲು ಗ್ರಾಮೀಣಾಭಿವೃದ್ಧಿ ಇಲಾಖೆ ಸಹಾಯವಾಣಿ ತೆರೆದಿದ್ದು, 8277506000ಗೆ ಕರೆ ಮಾಡಿ ಕುಂದು-ಕೊರತೆಗಳ ಬಗ್ಗೆ ದೂರು ನೀಡಬಹುದು.
ಇದು ಗ್ರಾಮ ಪಂಚಾಯತಿಗೆ ಸಂಬoಧಿಸಿದ ಯಾವುದೇ ಮಾಹಿತಿ ಹಾಗೂ ಕುಂದು ಕೊರತೆಗಳಿಗಾಗಿ ರಾಜ್ಯ ಮಟ್ಟದಲ್ಲಿ ಸ್ಥಾಪಿಸಿದ ಆರ್‌ಡಿಪಿಆರ್ ಇಲಾಖೆಯ ಏಕೀಕೃತ ಸಹಾಯವಾಣಿಯಾಗಿದೆ. ಗ್ರಾಮ ಪಂಚಾಯತಿಗೆ ಸಂಬoದಿಸಿದ ಕುಡಿಯುವ ನೀರು, ಸ್ವಚ್ಚತೆ, ನರೇಗಾ ಕೂಲಿ ಹಾಗೂ ಕಾಮಗಾರಿ ಬೇಡಿಕೆ, ನರೇಗಾ ಕಾಮಗಾರಿ ಕುರಿತಾದ ಯಾವುದಾದರೂ ಕುಂದು ಕೊರತೆಗಳಿದ್ದರೆ ಅಥವಾ ರಾಜ್ಯ ಹಾಗೂ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಅವಶ್ಯವಿದ್ದರೆ ಆರ್‌ಡಿಪಿಆರ್ ಇಲಾಖೆಯ ಏಕೀಕೃತ ಸಹಾಯವಾಣಿಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದು. ಈ ಏಕೀಕೃತ ಸಹಾಯವಾಣಿ ಮೂಲಕ ಗ್ರಾಮೀಣ ಜನರ ಸಮಸ್ಯೆಗಳನ್ನ ದಾಖಲಿಸಿಕೊಳ್ಳಲಾಗುತ್ತದೆ. ನಂತರ ಇದಕ್ಕೆ ಸ್ಪಂದಿಸಿ ಜಿಲ್ಲಾ ಹಾಗೂ ತಾಲೂಕು ಪಂಚಾಯತಿಗಳ ಮೇಲಾಧಿಕಾರಿಗಳ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತದೆ. ಅದಾದ ಮೇಲೆ ಸಂಬoಧಪಟ್ಟ ಗ್ರಾಮ ಪಂಚಾಯತಿಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ಜನರ ಸಮಸ್ಯೆಗಳ ನಿವಾರಣೆ ಮಾಡುವ ಪ್ರಯತ್ನ ನಡೆಯುತ್ತಿದೆ.
`ಜನರು ಹಲವಾರು ಕುಂದು ಕೊರತೆಗಳನ್ನ ಮುಂದಿಟ್ಟುಕೊoಡು ಪ್ರತಿದಿನ ಗ್ರಾಮ ಪಂಚಾಯತಿಗೆ ಅಲೆಯುವುದನ್ನು ತಪ್ಪಿಸಲು ಈ ವ್ಯವಸ್ಥೆ ಜಾರಿಗೆ ಬಂದಿದೆ. ಈ ಬಗ್ಗೆ ಮುಂಡಗೋಡಿನ ಮಳಗಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಕಸ್ತೂರಿ ತಳವಾರ ಮಳಗಿಯ ವಿವಿಧ ಪ್ರದೇಶಗಳಿಗೆ ತೆರಳಿ ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ.

  • Related Posts

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    Leave a Reply

    Your email address will not be published. Required fields are marked *

    You cannot copy content of this page