6

ಬಿಜೆಪಿ ಪಾದಯಾತ್ರೆಗೆ ಜನ ಬೆಂಬಲ: ಹಾಡು ನೃತ್ಯದ ಮೂಲಕ ಹೆಜ್ಜೆ ಹಾಕಿದ ನಾಯಕರು!

ಉತ್ತರ ಕನ್ನಡ ಜಿಲ್ಲೆಯ 300ಕ್ಕೂ ಅಧಿಕ ಜನ ಭಾಗವಹಿಸಿರುವ ಬಿಜೆಪಿ ಪಾದಯಾತ್ರೆ ಇದೀಗ ಬೆಂಗಳೂರಿನ ಕುಂಬ್ಳಗೋಡ ತಲುಪಿದೆ.
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಗರು ಆಯೋಜಿಸಿದ `ಮೈಸೂರು ಚಲೋ’ ಪಾದಯಾತ್ರೆ ಶನಿವಾರ ಬೆಂಗಳೂರಿನ ಕೆಂಗೇರಿಯಿoದ ಶುರುವಾಯಿತು. ರಾತ್ರಿ 8 ಗಂಟೆ ವೇಳೆಗೆ ಈ ಪಾದಯಾತ್ರೆ ಬಿಡದಿ ತಲುಪಲಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದವರು ಶನಿವಾರ 16ಕಿಮೀ ನಡೆಯಲಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಒಟ್ಟಿಗೆ ಈ ಪಾದಯಾತ್ರೆ ನಡೆಸಿದ್ದು, 50 ಸಾವಿರಕ್ಕೂ ಅಧಿಕ ಜನ ಭಾಗಿಯಾಗಿದ್ದಾರೆ.
ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಪ್ರತಿಭಟನಾಕಾರರು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಹಾಡು ನೃತ್ಯಗಳ ಮೂಲಕ ರಸ್ತೆಯೂದ್ದಕ್ಕೂ ನಾಯಕರು ಹೆಜ್ಜೆ ಹಾಕಿದ್ದಾರೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಶಾಸಕ ದಿನಕರ ಶೆಟ್ಟಿ, ಮಾಜಿ ಶಾಸಕಿ ರೂಪಾಲಿ ನಾಯ್ಕ, ಪ್ರಮುಖರಾದ ಸೂರಜ ನಾಯ್ಕ ಸೋನಿ ಮೊದಲಾದವರು ಈ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ. ಶನಿವಾರ ರಾತ್ರಿ ಬಿಡದಿಯಲ್ಲಿ ವಸತಿ ಹೂಡಿ ಭಾನುವಾರ ಮೈಸೂರಿನ ಕಡೆ ಈ ಪಾದಯಾತ್ರೆ ಸಂಚರಿಸಲಿದೆ.
ಪಾದಯಾತ್ರೆಯ ದೃಶ್ಯಾವಳಿಗಳನ್ನು ಇಲ್ಲಿ ನೋಡಿ..

  • Related Posts

    ನಾನಾ ಪಾಟೇಕರ್ ನಿಧನಕ್ಕೆ : ಬೊಮ್ಮಾಯಿ ಸಂತಾಪ

    Share this… Facebook Pinterest Twitter Linkedin Whatsapp*ನಟ ನಾನಾ ಪಾಟೇಕರ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ* ಬೆಂಗಳೂರು: ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ದುಖವಾಯಿತು. ಹಿಂದಿ ಹಾಗೂ ಮರಾಠಿ…

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    Leave a Reply

    Your email address will not be published. Required fields are marked *

    You cannot copy content of this page